ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಸಿದ್ದು ದರ್ಪ ಮುರಿಯಲು ಒಗ್ಗಟ್ಟು: ಕುಮಾರ ಸ್ವಾಮಿ

ಸಿದ್ದರಾಮಯ್ಯ ಅವರ ದರ್ಪ ಮುರಿಯಲೆಂದೇ ಜೆಡಿಎಸ್ ಒಗ್ಗಟ್ಟಾಗಿದೆ ಎಂದು ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷ ಕುಮಾರ ಸ್ವಾಮಿ ಹೇಳಿದ್ದಾರೆ.

Srinivasa Murthy VN
Updated On : 11 Aug 2013, 4:58 am

ಚನ್ನಪಟ್ಟಣ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ದರ್ಪ ಮುರಿಯಲೆಂದೇ ಜೆಡಿಎಸ್ ಒಗ್ಗಟ್ಟಾಗಿದೆ ಎಂದು ಜ್ಯಾತ್ಯಾತೀತ ಜನಾತಾದಳ ಪಕ್ಷದ ರಾಜ್ಯಾಧ್ಯಕ್ಷ ಕುಮಾರ ಸ್ವಾಮಿ ಹೇಳಿದ್ದಾರೆ.

ಚನ್ನಪಟ್ಟಣದಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಕುಮಾರ ಸ್ವಾಮಿ ಅವರು, ಲೋಕಸಭಾ ಉಪ ಚುನಾವಣೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ದರ್ಪ ಮುರಿಯಲೆಂದೇ ಇತರೆ ಪಕ್ಷಗಳೊಂದಿಗೆ ಒಂದಾಗಿದ್ದು, ಚುನಾವಣೆಯಲ್ಲಿ ಜೆಡಿಎಸ್ ಜಯಭೇರಿ ಭಾರಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

'ಲೋಕಸಭಾ ಉಪ ಚುನಾವಣೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ದರ್ಪ ಮುರಿಯಲೆಂದೇ ಜೆಡಿಎಸ್ ಒಗ್ಗಟ್ಟಾಗಿದ್ದು, ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೋಲು ಖಚಿತ. ವಿಧಾನ ಸಭಾ ಚುನಾವಣೆಗೂ ಮುನ್ನ ಭ್ರಷ್ಟಚಾರದ ವಿರುದ್ಧ ಮಾತನಾಡಿದ್ದ ಸಿದ್ದರಾಮಯ್ಯ, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಭ್ರಷ್ಟರ ವಿರುದ್ಧ ತನಿಖೆ ನಡೆಸುವುದಾಗಿ ತಿಳಿಸಿದ್ದರು. ಆದರೆ ಇದೀಗ ಆ ಬಗ್ಗೆ ಅವರಿಗೆ ಗಮನವೇ ಇಲ್ಲದಾಗಿದೆ. ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಿದ್ದು, ಸ್ವತಃ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ ಸ್ಥಾನದಲ್ಲಿದ್ದಾರೆ. ಆದರೂ ಭ್ರಷ್ಟರ ವಿರುದ್ಧ ಯಾವುದೇ ತನಿಖೆ ನಡೆಯುತ್ತಿಲ್ಲ ಎಂದು ಕುಮಾರ ಸ್ವಾಮಿ ಕಿಡಿಕಾರಿದರು.

ಅಂತೆಯೇ ಇಂದು ಆನೇಕಲ್ ತಾಲೂಕಿನಲ್ಲಿ ಚುನಾವಣಾ ಪ್ರಚಾರದಲ್ಲಿ ಮಾತನಾಡಿದ ಕುಮಾರ ಸ್ವಾಮಿ ಅವರು, ಜೆಡಿಎಸ್ ಪಕ್ಷವನ್ನು ಬೆಂಬಲಿಸುವ ಯಾವುದೇ ನಾಗರೀಕನಿಗೂ ಆತ್ಮೀಯ ಸ್ವಾಗತ ಕೋರುತ್ತೇವೆ. ಪಕ್ಷಕ್ಕೆ ಬೆಂಬಲ ಸೂಚಿಸಿ ಬರುವ ನಾಗರೀಕರನ್ನು ಆತ್ಮೀಯ ಸ್ವಾಗತ ಮಾಡಿಕೊಳ್ಳಲಾಗುತ್ತದೆಯೇ ಹೊರತು ಯಾವುದೇ ಕಾರಣಕ್ಕೂ ಅವರನ್ನು ದೂರತಳ್ಳುವುದಿಲ್ಲ ಎಂದು ಹೇಳಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement