ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಹೊಂದಾಣಿಕೆ, ಬಿಜೆಪಿಗೆ ನೈತಿಕತೆ ಇಲ್ಲ: ಸಚಿವ ಗುಂಡೂರಾವ್

ರಾಷ್ಟ್ರೀಯ ಪಕ್ಷ ಭಾರತೀಯ ಜನತಾ ಪಕ್ಷ(ಬಿಜೆಪಿ) ಜೆಡಿಎಸ್‌ನೊಂದಿಗೆ ಹೊಂದಾಣಿಕೆ ಮಾಡಿಕೊಂಡು ನೈತಿಕತೆ ಕಳೆದುಕೊಂಡಿದೆ...

Vishwanath S
Updated On : 11 Aug 2013, 2:23 am

ಬೆಂಗಳೂರು: ರಾಷ್ಟ್ರೀಯ ಪಕ್ಷ ಭಾರತೀಯ ಜನತಾ ಪಕ್ಷ(ಬಿಜೆಪಿ) ಜೆಡಿಎಸ್‌ನೊಂದಿಗೆ ಹೊಂದಾಣಿಕೆ ಮಾಡಿಕೊಂಡು ನೈತಿಕತೆ ಕಳೆದುಕೊಂಡಿದೆ ಎಂದು ಆಹಾರ ಸಚಿವ ದಿನೇಶ್ ಗುಂಡೂರಾವ್ ಭಾನುವಾರ ಆರೋಪಿಸಿದರು.

ಆನೇಕಲ್‌ನ ಬನ್ನೇರುಘಟ್ಟದಲ್ಲಿ ರೋಡ್‌ಶೋ ಮೂಲಕ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ. ಸುರೇಶ್ ಪರ ಗುಂಡೂರಾವ್ ಪ್ರಚಾರ ಮಾಡಿದರು. ಇದೇ ಸಂದರ್ಭದಲ್ಲಿ ಮಾತನಾಡಿದ ಅವರು, ಬಿಜೆಪಿ ಹಾಗೂ ಜೆಡಿಎಸ್ ವಿರುದ್ಧ ಹಾರಿಹಾಯ್ದರು. ರಾಷ್ಟ್ರೀಯ ಪಕ್ಷವಾಗಿರುವ ಬಿಜೆಪಿ, ಪ್ರಾದೇಶಿಕ ಪಕ್ಷವಾಗಿರುವ ಜೆಡಿಎಸ್‌ನೊಂದಿಗೆ ಹೊಂದಾಣಿಗೆ ಮಾಡಿಕೊಂಡು ತನ್ನ ನೈತಿಕತೆ ಕಳೆದುಕೊಂಡಿದೆ. ಹೀಗಾಗಿ ಲೋಕಸಭಾ ಚುನಾವಣೆಯಲ್ಲಿ ಆ ಎರಡು ಪಕ್ಷಗಳಿಗೆ ಜನರೇ ಬುದ್ಧಿ ಕಲಿಸಬೇಕಿದೆ ಎಂದರು.

ಜೆಡಿಎಸ್ ತಂದೆ ಮಕ್ಕಳ ಪಕ್ಷವಾಗಿದ್ದು, ಕುಟುಂಬ ರಾಜಕಾರಣ ಮಾಡುವುದರಲ್ಲಿ ಸಿದ್ಧ ಹಸ್ತರು. ಅಲ್ಲದೆ ತಮ್ಮ ಸ್ವಂತ ಅಭಿವೃದ್ದಿಗಾಗಿ ಪಕ್ಷವನ್ನು ಬಳಸಿಕೊಳ್ಳುತ್ತಿದ್ದಾರೆ. ಹೀಗಾಗಿ ಜೆಡಿಎಸ್‌ನಿಂದ ರಾಜ್ಯದ ಜನತೆಗೆ ಯಾವುದೇ ಉಪಯೋಗವಾಗುವುದಿಲ್ಲ ಎಂದು ಕಿಡಿಕಾರಿದರು.

ಬೆಂಗಳೂರು ಗ್ರಾಮಾಂತರ ಲೋಕಸಭಾ ಉಪಚುನಾವಣೆ ಪ್ರಚಾರದ ಭರಾಟೆ ಜೋರಾಗಿದ್ದು, ತಮ್ಮ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸುವ ನಿಟ್ಟಿನಲ್ಲಿ ಕಾಂಗ್ರೆಸ್‌ನ ಸಚಿವರು ಪ್ರಚಾರ ಕಾರ್ಯದಲ್ಲಿ ತೊಡಗಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement