ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಆಹಾರ ಭದ್ರತೆ ಮಸೂದೆಗೆ ಆಕ್ಷೇಪ: ಪ್ರಧಾನಿಗೆ ಮೋದಿ ಪತ್ರ

Vishwanath S
Updated On : 12 Aug 2013, 7:57 am

ನವದೆಹಲಿ: ಯುಪಿಎ ಸರ್ಕಾರದ ಮಹತ್ವಕಾಂಕ್ಷಿಯ ಆಹಾರ ಭದ್ರತೆ ಕಾಯ್ದೆಗೆ ಆಕ್ಷೇಪ ವ್ಯಕ್ತಪಡಿಸಿರುವ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಅವರು ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಸೋಮವಾರ ಪತ್ರ ಬರೆದಿದ್ದಾರೆ.

ಆಹಾರ ಭದ್ರತೆ ಮಸೂದೆ ಜಾರಿಗೆ ಸಂಬಂಧಿಸಿದಂತೆ ಮಸೂದೆಯಲ್ಲಿ ಕೆಲವೊಂದು ಅಂಶಗಳಿಗೆ ಆಕ್ಷೇಪ ವ್ಯಕ್ತಪಡಿಸಿರುವ ಮೋದಿ ಅವರು ಕೆಲವೊಂದು ಬದಲಾವಣೆಗಳನ್ನು ಮಾಡುವಂತೆ ಸೂಚಿಸಿ ಪತ್ರ ಬರೆದಿದ್ದಾರೆ.

ಒಂದು ಕಡೆ ಆಹಾರ ಭದ್ರತೆ ಮಸೂದೆ ಜಾರಿಗಾಗಿ ಕೇಂದ್ರ ಸರ್ಕಾರ ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದರೆ. ಮತ್ತೊಂದು ಕಡೆ ಮಸೂದೆಯಲ್ಲಿ ಕೆಲವೊಂದು ಬದಲಾವಣೆ ಮಾಡುವಂತೆ ವಿಪಕ್ಷಗಳಿಂದ ತೀವ್ರ ವಿರೋಧ ವ್ಯಕ್ತವಾಗುತ್ತಿದೆ.

ದೇಶದ ಪ್ರತಿಯೊಬ್ಬ ಪ್ರಜೆಗು ಆಹಾರ ಭದ್ರತೆ ಒದಗಿಸಬೇಕು ಎಂಬ ಉದ್ದೇಶದಿಂದಾಗಿ ಆಹಾರ ಭದ್ರತೆ ಮಸೂದೆ ಜಾರಿಗೆ ಕಾಂಗ್ರೆಸ್ ಪ್ರಯತ್ನಿಸುತ್ತಿದೆ.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement