ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಗಡಿ ಉಲ್ಲಂಘನೆ ವಿರುದ್ಧ ಕ್ರಮಕ್ಕೆ ಸೇನೆಗೆ ಮುಕ್ತ ಅವಕಾಶ: ಆಂಟನಿ

ಪದೇ ಪದೇ ಕದನ ವಿರಾಮ ಉಲ್ಲಂಘಿಸಿ ಗಡಿ ಭಾಗದಲ್ಲಿ ಕ್ಯಾತೆ ತೆಗೆಯುತ್ತಿರುವ ಪಾಕಿಸ್ತಾನ ಹಾಗೂ ಗಡಿಯಲ್ಲಿ ಅಕ್ರಮವಾಗಿ...

Vishwanath S
Updated On : 12 Aug 2013, 2:32 am

ನವದೆಹಲಿ: ಪದೇ ಪದೇ ಕದನ ವಿರಾಮ ಉಲ್ಲಂಘಿಸಿ ಗಡಿ ಭಾಗದಲ್ಲಿ ಕ್ಯಾತೆ ತೆಗೆಯುತ್ತಿರುವ ಪಾಕಿಸ್ತಾನ ಹಾಗೂ ಗಡಿಯಲ್ಲಿ ಅಕ್ರಮವಾಗಿ ನುಸುಳಲು ಯತ್ನಿಸುವ ಚೀನಾ ಸೇನೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಭಾರತೀಯ ಸೇನೆಗೆ ಮುಕ್ತ ಅವಕಾಶ ನೀಡಲಾಗಿದೆ ಎಂದು ರಕ್ಷಣಾ ಸಚಿವ ಎ.ಕೆ. ಆಂಟನಿ ಅವರು ಸೋಮವಾರ ಹೇಳಿದ್ದಾರೆ.

ಇಂದು ಭಾರತೀಯ ಸೇನೆಗೆ 'ಐಎನ್‌ಎಸ್ ವಿಕ್ರಾಂತ' ವಿಮಾನ ನೌಕೆಯನ್ನು ಲೋಕಾರ್ಪಣೆ ಮಾಡಿದ ನಂತರ ಮಾತನಾಡಿದ ಅವರು, ಗಡಿ ಭಾಗದಲ್ಲಿ ಪಾಕಿಸ್ತಾನ ಸೈನಿಕರು ಕಳೆದ ನಾಲ್ಕೈದು ದಿನಗಳಿಂದ ಪದೇ ಪದೇ ಗಡಿಯಲ್ಲಿ ಭಾರತೀಯ ಸೇನಾ ಕ್ಯಾಂಪ್‌ಗಳ ಮೇಲೆ ದಾಳಿ ಮಾಡುತ್ತಿದೆ. ಹೀಗಾಗಿ ಪಾಕಿಸ್ತಾನದ ಈ ಕ್ರಮವನ್ನು ಖಂಡಿಸಿದ್ದು, ಗಡಿಯಲ್ಲಿ ತಕರಾರು ತೆಗೆಯುತ್ತಿರುವ ಪಾಕಿಸ್ತಾನ ಹಾಗೂ ಚೀನಾ ಸೇನೆಗೆ ಸೂಕ್ತ ಪ್ರತ್ಯುತ್ತರ ನೀಡಲು ಭಾರತೀಯ ಸೇನೆಗೆ ಸಂಪೂರ್ಣ ಅಧಿಕಾರ ನೀಡಲಾಗಿದೆ ಎಂದರು.

ಕಳೆದ ವಾರ ಜಮ್ಮು ಕಾಶ್ಮೀರದ ಪೂಂಚ್ ಸೆಕ್ಟರ್ ಮೇಲೆ ಪಾಕಿಸ್ತಾನಿ ಸೈನಿಕರು ದಾಳಿ ಮಾಡಿ ಐವರು ಯೋಧರನ್ನು ಹತ್ಯೆ ಮಾಡಿದ್ದರು. ಹೀಗಾಗಿ ಭಾರತೀಯ ಸೇನೆಯ ಕೈ ಬಲ ಪಡಿಸುವ ಸಲುವಾಗಿ ಈ ಕ್ರಮಕೈ ಮುಂದಾಗಿದ್ದು, ತುರ್ತು ಸಂದರ್ಭದಲ್ಲಿ ಗಡಿ ನಿಯಮಗಳನ್ನು ಉಲ್ಲಂಘಿಸುವವರ ವಿರುದ್ಧ ಕಾರ್ಯಚರಣೆಗೆ ಮುಂದಾಗಲು ಸೇನೆಗೆ ಮುಕ್ತ ಅಧಿಕಾರವಿದೆ ಎಂದು ಆಂಟನಿ ತಿಳಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement