ಜನರ ಭಾವನೆಗಳೊಂದಿಗೆ ಎಚ್ಡಿಕೆ ಆಟವಾಡುತ್ತಿದ್ದಾರೆ: ಸಿಎಂ ಸಿದ್ದು
ಬೆಂಗಳೂರು ಗ್ರಾಮಾಂತರ ಹಾಗೂ ಮಂಡ್ಯ ಲೋಕಸಭೆ ಉಪ ಚುನಾವಣೆ ಜೆಡಿಎಸ್ ಹಾಗೂ ಕಾಂಗ್ರೆಸ್ ನಡುವಿನ ..
ಚನ್ನಪಟ್ಟಣ: ಬೆಂಗಳೂರು ಗ್ರಾಮಾಂತರ ಹಾಗೂ ಮಂಡ್ಯ ಲೋಕಸಭೆ ಉಪ ಚುನಾವಣೆ ಜೆಡಿಎಸ್ ಹಾಗೂ ಕಾಂಗ್ರೆಸ್ ನಡುವಿನ ಜಿದ್ದಾಜಿದ್ದಿಗೆ ಕಾರಣವಾಗಿದ್ದು, ಉಭಯ ಪಕ್ಷಗಳ ನಾಯಕರ ಆರೋಪ ಪ್ರತ್ಯಾರೋಪ ತೀವ್ರಗೊಂಡಿದೆ.
ಲೋಕಸಭೆ ಉಪ ಚುನಾವಣೆಗೆ ಮಾಜಿ ಮುಖ್ಯಮಂತ್ರಿ ಹಾಗೂ ಪ್ರತಿಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಅವರೇ ಕಾರಣ. ಅವರು ಮುಖ್ಯಮಂತ್ರಿಯಾಗುವ ಆಸೆಯಿಂದ ಸಂಸದ ಸ್ಥಾನಕ್ಕೆ ರಾಜಿನಾಮೆ ನೀಡಿ, ಮತದಾರರ ಜೊತೆ ಚೆಲ್ಲಾಟವಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಆರೋಪಿಸಿದ್ದಾರೆ.
ಇಂದು ಚನ್ನಪಟ್ಟಣದಲ್ಲಿ ಚುನಾವಣಾ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಸಿಎಂ, ಪ್ರತಿಪಕ್ಷ ನಾಯಕ ಕುಮಾರಸ್ವಾಮಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಕುಮಾರಸ್ವಾಮಿ ಅವರು ಜನರ ಭಾವನೆಗಳೊಂದಿಗೆ ಆಟವಾಡುತ್ತಿದ್ದಾರೆ. ಅವರು ಕರ್ನಾಟಕವನ್ನು ತಮ್ಮ ಮನೆಯ ಆಸ್ತಿ ಎಂದು ತಿಳಿದುಕೊಂಡಿದ್ದಾರೆ ಎಂದು ಎಚ್ಡಿಕೆ ವಿರುದ್ಧ ಕಿಡಿ ಕಾರಿದರು.
ಎಚ್ಡಿಕೆ ಅವರು ಸ್ವೇಚ್ಛೆಯಾಗಿ ರಾಜಕಾರಣ ಮಾಡಬಹುದು ಎಂದಿಕೊಂಡಿದ್ದಾರೆ. ಜನತೆ ಅವರಿಗೆ ತಕ್ಕ ಉತ್ತರ ನೀಡುತ್ತಾರೆ ಎಂದು ಸಿಎಂ ಹೇಳಿದರು.