ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಇಶ್ರತ್ ಎನ್‌ಕೌಂಟರ್: ನ್ಯಾಯಾಲಯಕ್ಕೆ ಪಾಂಡೆ ಶರಣು

Vishwanath S
Updated On : 13 Aug 2013, 3:03 am

ಅಹಮದಾಬಾದ್: ಇಶ್ರತ್ ಜಾಹಾನ್ ಎನ್‌ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಪೊಲೀಸ್ ವರಿಷ್ಠಾಧಿಕಾರಿ ಪಿ.ಪಿ ಪಾಂಡೆ ಅವರು ಮಂಗಳವಾರ ಸಿಬಿಐ ಕೋರ್ಟ್ ಮುಂದೆ ಶರಣಾಗಿದ್ದಾರೆ.

1982 ನೇ ಬ್ಯಾಚ್‌ನ ಐಪಿಎಸ್ ಅಧಿಕಾರಿ ಪಾಂಡೆ ಅವರು, ಇಶ್ರತ್ ಎನ್‌ಕೌಂಟರ್ ಪ್ರಕರಣದ ಪ್ರಮುಖ ಆರೋಪಿಯಾಗಿದ್ದು, ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ವಜಾಗೊಂಡಿದ್ದರಿಂದ ಇಂದು ಸಿಬಿಐ ಕೋರ್ಟ್‌ನ ಹೆಚ್ಚುವರಿ ಮುಖ್ಯ ನ್ಯಾಯಾಧೀಶರಾದ ಎಚ್.ಎಸ್. ಕೌತ್ವಾಡ್ ಅವರ ಮುಂದೆ ಹಾಜರಾದರು. ನಿನ್ನೆ ಪ್ರಕರಣದ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್‌ನ ನ್ಯಾಯಾಧೀಶರು ಅರ್ಜಿಯನ್ನು ವಜಾಗೊಳಿಸಿದ್ದರು.

ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಂಡೆ ಅವರು ತಲೆ ಮರೆಸಿಕೊಂಡಿದ್ದಾರೆಂದು ಆರೋಪಿಸಿ ಸಿಬಿಐ ಕೋರ್ಟ್ ಅವರ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿತ್ತು. ಇಶ್ರತ್ ಜಾಹಾನ್ ನಕಲಿ ಎನ್‌ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯಾಗಿರುವ ಪಾಂಡೆ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಸುಪ್ರೀಂಕೋರ್ಟ್ ಸೋಮವಾರ ವಜಾಗೊಳಿಸಿತ್ತು.

2004ರಲ್ಲಿ ಅಹಮದಾಬಾದ್‌ನ ಜಂಟಿ ಪೊಲೀಸ್ ಆಯುಕ್ತರಾಗಿದ್ದ ಸಂದರ್ಭದಲ್ಲಿ ಮುಂಬೈ ಮೂಲದ ಕಾಲೇಜು ವಿದ್ಯಾರ್ಥಿನಿ ಇಶ್ರತ್ ಜಹಾನ್ ಸೇರಿದಂತೆ ಏಳು ಮಂದಿಯನ್ನು ಭಯೋತ್ಪಾದಕರೆಂಬ ಕಾರಣ ನೀಡಿ ಎನ್‌ಕೌಂಟರ್ ಮಾಡಲಾಗಿತ್ತು. ಈ ಸಂಬಂಧ ತನಿಖೆ ಮಾಡಿದ್ದ ಸಿಬಿಐ ಇದೊಂದು ನಕಲಿ ಎನ್‌ಕೌಂಟರ್ ಎಂದು ವರದಿ ನೀಡಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement