ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಸೋಲಾರ್ ಹಗರಣ: ನ್ಯಾಯಾಂಗ ತನಿಖೆಗೆ ಕೇರಳ ಸಿಎಂ ಆದೇಶ

ಸೋಲಾರ್ ಹಗರಣದ ವಿರುದ್ಧದ ಪ್ರತಿಪಕ್ಷಗಳ ಹೋರಾಟಕ್ಕೆ ಕಡೆಗೂ ಮಣಿದಿರುವ ಕೇರಳ ಮುಖ್ಯಮಂತ್ರಿ...

Vishwanath S
Updated On : 13 Aug 2013, 2:22 am

ತಿರುವನಂತಪುರಂ: ಸೋಲಾರ್ ಹಗರಣದ ವಿರುದ್ಧದ ಪ್ರತಿಪಕ್ಷಗಳ ಹೋರಾಟಕ್ಕೆ ಕಡೆಗೂ ಮಣಿದಿರುವ ಕೇರಳ ಮುಖ್ಯಮಂತ್ರಿ ಉಮ್ಮನ್ ಚಾಂಡಿ ಅವರು, ಹಗರಣದ ಕುರಿತು ಮಂಗಳವಾರ ನ್ಯಾಯಾಂಗ ತನಿಖೆಗೆ ಆದೇಶಿಸಿದ್ದಾರೆ.

ಹಗರಣದ ವಿರುದ್ಧ ಪ್ರತಿಪಕ್ಷಗಳು ಭಾರಿ ಪ್ರತಿಭಟನೆ ನಡೆಸಿದ್ದವು. ಈ ಸಂಬಂಧ ಮುಖ್ಯಮಂತ್ರಿ ಉಮ್ಮನ್ ಚಾಂಡಿ ರಾಜಿನಾಮೆ ನೀಡಬೇಕು ಎಂದು ಒತ್ತಾಯಿಸಿ ನಿನ್ನೆ ಕೇರಳ ವಿಧಾನಸಭೆಗೆ ಮುತ್ತಿಗೆ ಹಾಕಿದ್ದವು. ಪ್ರತಿಪಕ್ಷಗಳ ಪ್ರತಿಭಟನೆಯ. ಬಿಸಿ ತಟ್ಟುತ್ತಿದ್ದಂತೆ ಎಚ್ಚೆತ್ತುಕೊಂಡ ಚಾಂಡಿ, ಹಗರಣವನ್ನು ನ್ಯಾಯಾಂಗ ತನಿಖೆಗೆ ಆದೇಶಿದ್ದು, ಹಗರಣದ ತನಿಕೆಯನ್ನು ಹೈಕೋರ್ಟ್‌ನ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ನಡೆಯಲಿದೆ ಎಂದು ತಿಳಿಸಿದ್ದಾರೆ.

ಸೋಲಾರ್ ಹಗರಣ ಸಂಬಂದ ಪ್ರತಿಪಕ್ಷಗಳಿಂದ ತೀವ್ರ ಟೀಕೆಗೆ ಒಳಗಾಗಿದ್ದ ಉಮ್ಮನ್ ಚಾಂಡಿ, ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಬೇಕು ಎಂದು ಎಲ್‌ಡಿಎಫ್ ನಾಯಕರು ನಿನ್ನೆಯಿಂದ ಚಾಂಡಿ ವಿರುದ್ಧ ಪ್ರತಿಭಟನಾ ರ್ಯಾಲಿ ನಡೆಸುತ್ತಿದ್ದಾರೆ. ಇದರಿಂದಾಗಿ ತೀವ್ರ ಮುಜುಗರಕ್ಕೆ ಬಳಗಾಗಿರುವ ಉಮ್ಮನ್ ಚಾಂಡಿ ಅವರು ಹಗರಣವನ್ನು ನ್ಯಾಯಾಂಗ ತನಿಖೆಗೆ ಆದೇಶಿಸಿದ್ದು, ತನಿಖೆಯ ನೇತೃತ್ವ ವಹಿಸುವಂತೆ ಹೈಕೋರ್ಟ್‌ನ ನ್ಯಾಯಮೂರ್ತಿಗಳನ್ನು ಕೇಳಿಕೊಂಡಿದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಗರಣಕ್ಕೆ ಸಂಬಂಧಿಸಿದಂತೆ ಎಲ್‌ಡಿಎಫ್ ನಾಯಕರೊಂದಿಗೆ ಮುಖಾಮುಖಿ ಚರ್ಚಿಗೆ ಸರ್ಕಾರ ಸಿದ್ಧವಿದೆ ಎಂದರು. ಇದೇ ವೇಳೆ, ಎಲ್‌ಡಿಎಫ್ ನಾಯಕರು ರಾಜಧಾನಿಯಲ್ಲಿ ನಡೆಸುತ್ತಿರುವ ಪ್ರತಿಭಟನಾ ರ್ಯಾಲಿಯನ್ನು ನಿಲ್ಲಿಸುವಂತೆ ಮನವಿ ಮಾಡಿದರು. ಹಗರಣಕ್ಕೆ ಸಂಬಂಧಿಸಿದಂತೆ ಯಾವುದೇ ರೀತಿಯ ತನಿಖೆ ನಡೆಸಲು ಸರ್ಕಾರ ಸಿದ್ಧವಿದೆ. ಈಗಾಗಲೇ ಹಗರಣದ ತನಿಖೆಯನ್ನು ವಿಶೇಷ ತನಿಖಾ ತಂಡ(ಎಸ್‌ಐಟಿ) ನಡೆಸುತ್ತಿದ್ದು, ತನಿಖೆ ಮುಗಿಯಲಿ ಎಂದ ತಿಳಿಸಿದರು.

ಮುಖ್ಯಮಂತ್ರಿಗಳು ಹಗರಣದ ತನಿಖೆಯನ್ನು ನ್ಯಾಯಾಂಗ ತನಿಖೆಗೆ ಆದೇಶಿಸುತ್ತಿದ್ದಂತೆ ನಿನ್ನೆಯಿಂದ ನಡೆಸುತ್ತಿದ್ದ ಪ್ರತಿಭಟನಾ ರ್ಯಾಲಿಯನ್ನು ಎಲ್‌ಡಿಎಫ್ ಹಿಂಪಡೆದಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement