ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಸಂಸದ ಜಯಪ್ರಕಾಶ್ ಹೆಗ್ಡೆ ಆಪ್ತ ಸಹಾಯಕ ಆತ್ಮಹತ್ಯೆ

ಚಿಕ್ಕಮಗಳೂರು ಸಂಸದ ಜಯಪ್ರಕಾಶ್ ಹೆಗ್ಡೆ ಅವರ ಆಪ್ತ ಸಹಾಯಕ ಜಗನ್ನಾಥ್(48) ಅವರು ಬುಧವಾರ ಆತ್ಯಹತ್ಯೆಗೆ ಶರಣಾಗಿದ್ದಾರೆ..

Lingaraj Badiger
Updated On : 14 Aug 2013, 1:38 am

ಚಿಕ್ಕಮಗಳೂರು: ಚಿಕ್ಕಮಗಳೂರು ಸಂಸದ ಜಯಪ್ರಕಾಶ್ ಹೆಗ್ಡೆ ಅವರ ಆಪ್ತ ಸಹಾಯಕ ಜಗನ್ನಾಥ್(48) ಅವರು ಬುಧವಾರ ಆತ್ಯಹತ್ಯೆಗೆ ಶರಣಾಗಿದ್ದಾರೆ.

ಜಯಪ್ರಕಾಶ್ ಹೆಗ್ಡೆ ಅವರ ಬಳಿ ಆಪ್ತ ಸಹಾಯಕರಾಗಿ ಕಾರ್ಯನಿರ್ವಹಿಸುತ್ತಿದ್ದ ಜಗನ್ನಾಥ್ ಅವರು ಇಂದು ಚಿಕ್ಕಮಗಳೂರಿನ ಪ್ರವಾಸಿ ಮಂದಿರದ ಕೊಠಡಿ ಸಂಖ್ಯೆ 4ರಲ್ಲಿ ನೇಣಿಗೆ ಶರಣಾಗಿದ್ದಾರೆ.

ಜಗನ್ನಾಥ್ ಅವರು ನಿನ್ನೆ ರಾತ್ರಿ ಚಿಕ್ಕಮಗಳೂರಿನ ಪ್ರವಾಸಿ ಮಂದಿರಕ್ಕೆ ಆಗಮಿಸಿದ್ದರು. ಪ್ರವಾಸಿ ಮಂದಿರದ ಕೊಠಡಿ ಸಂಖ್ಯೆ 4ರಲ್ಲಿ ಉಳಿಯಲು ಅವರಿಗೆ ವ್ಯವಸ್ಥೆ ಮಾಡಲಾಗಿತ್ತು. ಆದರೆ ಬೆಳಗ್ಗೆ ಎಷ್ಟು ಹೊತ್ತಾದರೂ ಜಗನ್ನಾಥ್ ಅವರು ಹೊರಬರದ ಹಿನ್ನೆಲೆಯಲ್ಲಿ ಅನುಮಾನಗೊಂಡ ಪ್ರವಾಸಿ ಮಂದಿರದ ಸಿಬ್ಬಂದಿ ಕೊಠಡಿಯ ಬಾಗಿಲು ಮುರಿದು ನೋಡಿದಾಗ, ಅವರು ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.

ಜಗನ್ನಾಥ್ ಅವರಿಗೆ ಹಣದ ಮುಗ್ಗಟ್ಟು ಎದುರಾಗಿತ್ತು. ಹೀಗಾಗಿ ಅವರು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಅವರ ಕುಟುಂಬದವರು ಪೊಲೀಸರಿಗೆ ಹೇಳಿಕೆ ನೀಡಿದ್ದಾರೆ. ಆದರೆ ಆತ್ಮಹತ್ಯೆಗೆ ನಿಖರ ಕಾರಣ ಇನ್ನು ತಿಳಿದು ಬಂದಿಲ್ಲ. ಚಿಕ್ಕಮಗಳೂರು ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement