ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಸಾಗರ ಬಳಿ ಬಸ್-ಕಾರು ನಡುವೆ ಡಿಕ್ಕಿ: 3 ಸಾವು

ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನಲ್ಲಿ ಗುರುವಾರ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು,..

Lingaraj Badiger
Updated On : 15 Aug 2013, 4:38 am

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನಲ್ಲಿ ಗುರುವಾರ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಮತ್ತು ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಸಾಗರ ತಾಲೂಕಿನ ತಾಳಗುಪ್ಪ ಬಳಿ ಇಂದು ಮಧ್ಯಾಹ್ನ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ(ಕೆಎಸ್‌ಆರ್‌ಟಿಸಿ)ಯ ಬಸ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಅಪಘಾತದ ತೀವ್ರತೆಗೆ ಕಾರು ನಜ್ಜುಗುಜ್ಜಾಗಿದೆ.

ಅಪಘಾತದಲ್ಲಿ ಮೃತಪಟ್ಟವರನ್ನು ಮಹೇಶ, ಹನುಮಂತ ಹಾಗೂ ಗುರು ಎಂದು ಗುರುತಿಸಲಾಗಿದೆ. ಇನ್ನು ಗಾಯಗೊಂಡ ಇಬ್ಬರನ್ನು ಸಾಗರ ತಾಲೂಕ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಾಗರ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement