ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ದುರ್ಗಾಶಕ್ತಿ ಅಮಾನತು ರದ್ದು ಕೋರಿ ಸಲ್ಲಿಸಿದ್ದ ಪಿಐಎಲ್ ವಜಾ

ಐಎಎಸ್ ಅಧಿಕಾರಿ ದುರ್ಗಾಶಕ್ತಿ ನಾಗ್ಪಾಲ್ ಅವರ ಅಮಾನತು ರದ್ದು ಕೋರಿ ಸಲ್ಲಿಸಲಾಗಿದ್ದ ..

Lingaraj Badiger
Updated On : 16 Aug 2013, 12:55 pm

ನವದೆಹಲಿ: ಐಎಎಸ್ ಅಧಿಕಾರಿ ದುರ್ಗಾಶಕ್ತಿ ನಾಗ್ಪಾಲ್ ಅವರ ಅಮಾನತು ರದ್ದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ(ಪಿಐಎಲ್)ಯನ್ನು ಶುಕ್ರವಾರ ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.

ಅಮಾನತು ರದ್ದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ಸುಪ್ರೀಂ ಕೋರ್ಟ್, ದುರ್ಗಾಶಕ್ತಿ ಅವರು ಸ್ವತಃ ತಮ್ಮ ಬಗ್ಗೆ ಕಾಳಜಿ ವಹಿಸಬಹುದಾಗಿದೆ. ಅವರು ಅಮಾನತು ಆದೇಶವನ್ನು ಸೂಕ್ತ ವೇದಿಕೆಯಲ್ಲಿ ಪ್ರಶ್ನಿಸಬಹುದು ಎಂದು ಹೇಳಿದೆ.

ಉತ್ತರ ಪ್ರದೇಶದ ಯಮುನಾ ನದಿ ತೀರದಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಮರಳು ಮಾಫಿಯಾದ ವಿರುದ್ಧ ಕ್ರಮಕ್ಕೆ ಮುಂದಾಗಿದ್ದ ಗೌತಮ ಬುದ್ಧ ನಗರದ ಐಎಎಸ್ ಅಧಿಕಾರಿ ದುರ್ಗಾಶಕ್ತಿ ಅವರನ್ನು ಉತ್ತರ ಪ್ರದೇಶ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರು ಕಳೆದ ಜುಲೈ 27ರಂದು ಅಮಾನತು ಮಾಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement