ಅಕ್ರಮವಾಗಿ ಸಾಗಿಸುತ್ತಿದ್ದ 2.21 ಕೋಟಿ ವಶ
ಬೆಂಗಳೂರು: ಎರಡು ಟಾಟಾ ಸುಮೊಗಳಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 2.21 ಕೋಟಿ ರುಪಾಯಿಯನ್ನು ಸುಬ್ರಹ್ಮಣ್ಯಪುರಂ ಪೊಲೀಸರು ಶನಿವಾರ ವಶಪಡಿಸಿಕೊಂಡಿದ್ದಾರೆ.
ಲೋಕಸಭಾ ಉಪ ಚುನಾವಣೆ ಹಿನ್ನಲೆಯಲ್ಲಿ ರಾಜ್ಯದಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದು, ಈ ಸಂಬಂಧ ಬೆಂಗಳೂರಿನ ಪಿ.ಪಿ. ಲೇಔಟ್ ಚೆಕ್ಪೋಸ್ಟನಲ್ಲಿ ಪೊಲೀಸರು ವಾಹನಗಳ ತಪಾಸಣೆ ನಡೆಸುತ್ತಿದ್ದರು. ಈ ವೇಳೆ ಸೂಕ್ತ ದಾಖಲೆಗಳಿಲ್ಲದೆ ಎರಡು ಟಾಟಾ ಸುಮೊಗಳಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 2.21 ಕೋಟಿ ರುಪಾಯಿಯನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಅಕ್ರಮವಾಗಿ ಹಣ ಸಾಗಿಸುತ್ತಿದ್ದ ವಾಹನ ಚಾಲಕ ಸೇರಿದಂತೆ ನಾಲ್ವರನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಅಲ್ಲದೆ ವಶಪಡಿಸಿಕೊಂಡಿರುವ ಹಣದ ಬಗ್ಗೆ ಐಟಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದು, ಯಾವ ಕಾರಣಗಳಿಗಾಗಿ ಹಣವನ್ನು ಸಾಗಿಸಲಾಗುತ್ತಿತ್ತು ಎಂಬ ವಿಚಾರಗಳ ಕುರಿತಾಗಿ ಪರಿಶೀಲಿಸುತ್ತಿದ್ದಾರೆ. ಬೆಂಗಳೂರು ಗ್ರಾಮಾಂತರ ಹಾಗೂ ಮಂಡ್ಯ ಕ್ಷೇತ್ರಗಳ ಲೋಕಸಭಾ ಉಪ ಚುನಾವಣೆ ಸಂಬಂಧ ಮತದಾರರಿಗೆ ಹಂಚಲು ಹಣ ಸಾಗಿಸುತ್ತಿರುವ ಬಗ್ಗೆ ಅಧಿಕಾರಿಗಳು ಶಂಕೆ ವ್ಯಕ್ತಪಡಿಸಿದ್ದಾರೆ.