ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಮೋದಿ ಭೇಟಿ ಮಾಡಿದ್ದ ಸಾಧುಗೆ ನೋಟಿಸ್

ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಅವರು ನಿನ್ನೆ ಭೇಟಿ ಮಾಡಿದ್ದ ಕಾಂಗ್ರೆಸ್ ಮುಂಖಡ ಸಾಧು ಯಾದವ್...

Vishwanath S
Updated On : 17 Aug 2013, 3:49 am

ನವದೆಹಲಿ: ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಅವರು ನಿನ್ನೆ ಭೇಟಿ ಮಾಡಿದ್ದ ಕಾಂಗ್ರೆಸ್ ಮುಂಖಡ ಸಾಧು ಯಾದವ್ ಅವರಿಗೆ ಕಾಂಗ್ರೆಸ್ ಶನಿವಾರ ನೋಟಿಸ್ ಜಾರಿ ಮಾಡಿದೆ.

ಮೋದಿ ಭೇಟಿ ಬಗ್ಗೆ ಕಾರಣ ಕೇಳಿ ಸಾಧು ಯಾದವ್‌ಗೆ ನೋಟಿಸ್ ಜಾರಿ ಮಾಡಿರುವ ಕಾಂಗ್ರೆಸ್, ಪ್ರತಿಕ್ರಿಯೆ ಬಂದ ನಂತರ ಅವರನ್ನು ಪಕ್ಷದಿಂದ ಉಚ್ಛಾಟಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿರುವ ರಾಷ್ಟ್ರೀಯ ಜನತಾದಳ (ಆರ್‌ಜೆಡಿ)ದ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಅವರ ಅಳಿಯ ಸಾಧು ಯಾದವ್, ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದಾರೆ. ನನ್ನ ವಿರುದ್ಧ ಕಾಂಗ್ರೆಸ್ ಯಾವುದೇ ಕ್ರಮ ಕೈಗೊಳ್ಳಬಹುದು. ಪಕ್ಷ ಕೈಗೊಳ್ಳುವ ಯಾವುದೇ ಕ್ರಮಕ್ಕು ನಾನು ಹೆದರುವುದಿಲ್ಲ ಎಂದು ಹೇಳಿದ್ದಾರೆ. ಅಲ್ಲದೆ, ದೇಶದ ಬಗ್ಗೆ ಕಾಂಗ್ರೆಸ್ ಚಿಂತನೆ ನಡೆಸುತ್ತಿಲ್ಲ. ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಒಬ್ಬ ಪ್ರಭಾವಿ ನಾಯಕ ಅಲ್ಲ ಎಂದು ಟೀಕಿಸಿದ್ದಾರೆ.

ಇದೇ ವೇಳೆ, ದೇಶದ ಅಭಿವೃದ್ಧಿ ಹಾಗೂ ಪ್ರಗತಿಯ ಕುರಿತು ಕಾಂಗ್ರೆಸ್ ಚಿಂತನೆ ನಡೆಸುತ್ತಿಲ್ಲ. ಆದರೆ ನರೇಂದ್ರ ಮೋದಿಗೆ ದೇಶ ಎದುರಿಸುತ್ತಿರುವ ಸವಾಲುಗಳ ಬಗ್ಗೆ ಅರಿವಿದೆ. ಆ ಸವಾಲುಗಳನ್ನು ಎದುರಿಸಲು ಮೋದಿ ಸಮರ್ಥರಿದ್ದಾರೆ ಎಂದು ಹೇಳುವ ಮೂಲಕ ನೇರವಾಗಿ ಕಾಂಗ್ರೆಸ್ ವಿರುದ್ಧ ಹರಿಹಾಯ್ದರು. ಅಲ್ಲದೆ, ಇತ್ತೀಚಿನ ದಿನಗಳಲ್ಲಿ ಪಕ್ಷ ತನ್ನ ಅಸ್ತಿತ್ವವನ್ನು ಕಳೆದುಕೊಳ್ಳುತ್ತಿದೆ ಹಾಗೂ ಪಕ್ಷದ ಉಪಾಧ್ಯಕ್ಷರಾಗಿರುವ ರಾಹುಲ್ ಗಾಂಧಿ ಒಬ್ಬ ಪ್ರಭಾವಿ ನಾಯಕ ಅಲ್ಲ ಎನ್ನುವ ಮೂಲಕ ಪರೋಕ್ಷವಾಗಿ ಬಿಜೆಪಿ ಸೇರುವ ಬಗ್ಗೆ ತಮ್ಮ ಒಲವು ತೋರಿಸಿದ್ದಾರೆ.  

ದೇಶದ ಅಭಿವೃದ್ಧಿ ದಿನೇ ದಿನೇ ಕುಂಠಿತಗೊಳ್ಳುತ್ತಿದ್ದರು ಕಾಂಗ್ರೆಸ್ ಈ ಬಗ್ಗೆ ಚಿಂತನೆ ನಡೆಸುತ್ತಿಲ್ಲ. ಇದು ಹೀಗೆ ಮುಂದುವರೆದರೆ ದೇಶ ಕಠಿಣ ಸವಾಲುಗಳನ್ನು ಎದುರಿಸಬೇಕಾಗುತ್ತದೆ. ದೇಶದಲ್ಲಿ ಉದ್ಬವಿಸುವ ಯಾವುದೇ ಕಠಿಣ ಸವಾಲುಗಳನ್ನು ಸಮರ್ಥವಾಗಿ ಎದುರಿಸುವ ಶಕ್ತಿ ಮೋದಿಗಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement