ಸಿಎಂ ಸಿದ್ದರಾಮಯ್ಯ ಗೋಮುಖ ವ್ಯಾಘ್ರ: ಎಚ್‌ಡಿಕೆ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಗೋಮುಖ ವ್ಯಾಘ್ರ ಎಂದು ಕರೆದಿರುವ ಮಾಜಿ ಮುಖ್ಯಮಂತ್ರಿ..
ಕುಣಿಗಲ್: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಗೋಮುಖ ವ್ಯಾಘ್ರ ಎಂದು ಕರೆದಿರುವ ಮಾಜಿ ಮುಖ್ಯಮಂತ್ರಿ ಹಾಗೂ ಪ್ರತಿಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಅವರು, ಸಿದ್ದು ಕಾಂಗ್ರೆಸ್ ತೊರೆಯಲು ನಿರ್ಧರಿಸಿದ್ದರು ಎಂದು ಶನಿವಾರ ಹೊಸ ಬಾಂಬ್ ಸಿಡಿಸಿದ್ದಾರೆ.
ಇಂದು ಕುಣಿಗಲ್ ತಾಲೂಕಿನ ಉಜನಿಯಲ್ಲಿ ಮಾತನಾಡಿದ ಕುಮಾರಸ್ವಾಮಿ, ಸಿದ್ದರಾಮಯ್ಯ ಅವರು ಈ ಹಿಂದೆ ಕಾಂಗ್ರೆಸ್ ತೊರೆಯಲು ನಿರ್ಧರಿಸಿದ್ದರು. ಈ ಬಗ್ಗೆ ನಿವೃತ್ತ ಡಿಜಿಪಿ ಹಾಗೂ ಸಮಾಜವಾದಿ ಪಕ್ಷದ ರಾಜ್ಯಾಧ್ಯಕ್ಷ ಶಂಕರ್ ಬಿದರಿ ಅವರಿಗೆ ಗೊತ್ತಿದೆ. ಬಿದರಿ ಅವರು ಬಾಯಿ ಬಿಟ್ರೆ ಸಿದ್ದು ಬಣ್ಣ ಬಯಲಾಗುತ್ತದೆ ಎಂದು ಹೇಳಿದ್ದಾರೆ.
ಇನ್ನು ಇದೇ ವೇಳೆ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹಾಗೂ ಕುಮಾರಸ್ವಾಮಿ ಅವರು ತಮ್ಮ ಬಗ್ಗೆ ಮೃದು ಧೋರಣೆ ತಾಳಿದ್ದಾರೆ ಎಂಬ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಎಚ್‌ಡಿಕೆ, ಅವರ ಬಗ್ಗೆ ಮೃದು ಧೋರಣೆ ತಾಳುವ ಅಗತ್ಯ ಇಲ್ಲ ಎಂದಿದ್ದಾರೆ.