ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಸಲ್ಲು ಗುದ್ದೋಡು ಪ್ರಕರಣ: ವಿಚಾರಣೆ ಸೆಪ್ಟೆಂಬರ್ 5ಕ್ಕೆ ಮೂಂದೂಡಿಕೆ

ಬಾಲಿವುಡ್ ನಟ ಸಲ್ಮಾನ್‌ಖಾನ್ ಅವರ ಗುದ್ದೋಡು ಪ್ರಕರಣದ ವಿಚಾರಣೆಯನ್ನು ಸೋಮವಾರ ಮುಂಬೈ ನ್ಯಾಯಾಲಯ ಸೆಪ್ಟೆಂಬರ್ 5ಕ್ಕೆ ಮುಂದೂಡಿದೆ...

Mainashree
Updated On : 19 Aug 2013, 3:53 am

ಮುಂಬೈ: ಬಾಲಿವುಡ್ ನಟ ಸಲ್ಮಾನ್‌ಖಾನ್ ಅವರ ಗುದ್ದೋಡು ಪ್ರಕರಣದ ವಿಚಾರಣೆಯನ್ನು ಸೋಮವಾರ ಮುಂಬೈ ನ್ಯಾಯಾಲಯ ಸೆಪ್ಟೆಂಬರ್ 5ಕ್ಕೆ ಮುಂದೂಡಿದೆ.

ಇಂದು ಮುಂಬೈ ನ್ಯಾಯಾಲಯದಲ್ಲಿ ವಿಚಾರಣೆಗಾಗಿ ಸಲ್ಮಾನ್ ಖಾನ್ ಹಾಜರಾಗಬೇಕಿತ್ತು. ಆದರೆ ವೈಯಕ್ತಿಕ ಕಾರಣಗಳಿಂದಾಗಿ ವಿಚಾರಣೆಗೆ ಹಾಜರಾಗಲು ಸಾಧ್ಯವಿಲ್ಲ ಎಂದು ಕೋರಿ ಮೊದಲೇ ನ್ಯಾಯಾಲಯದಿಂದ ಅನುಮತಿ ಪಡೆದುಕೊಂಡಿದ್ದರು. ಈ ಹಿನ್ನಲೆಯಲ್ಲಿ ಇಂದು ನಡೆಯಬೇಕಿದ್ದ ವಿಚಾರಣೆಯನ್ನು ನ್ಯಾಯಾಲಯ ಸೆಪ್ಟೆಂಬರ್ 5ಕ್ಕೆ ಮುಂದೂಡಿದೆ.

2002ರ ಗುದ್ದೋಡು ಪ್ರಕರಣ ಸಂಬಂಧ ಬಾಲಿವುಡ್ ನಟ ಸಲ್ಮಾನ್ ಖಾನ್ ವಿರುದ್ಧ ಮುಂಬೈ ಕೋರ್ಟ್ ಕಳೆದ ತಿಂಗಳು ದೋಷಾರೋಪ ಹೊರಿಸಿತ್ತು. ಸಲ್ಲು ವಿರುದ್ಧ ಉದ್ದೇಶಪೂರ್ವಕವಲ್ಲದ ಹತ್ಯೆ ಆರೋಪ ಹೊರಿಸಲಾಗಿದ್ದು, ಅದು ಸಾಬೀತಾದರೆ ಅವರು 10 ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಬೇಕಾಗುವ ಸಾಧ್ಯತೆಯಿದೆ.

ಉದ್ದೇಶಪೂರ್ವಕವಲ್ಲದ ಹತ್ಯೆ ಮಾತ್ರವಲ್ಲದೆ ಇತರೆ ಸೆಕ್ಷನ್‌ಗಳಡಿಯಲ್ಲೂ ಸಲ್ಮಾನ್ ವಿರುದ್ಧ ಕೇಸು ದಾಖಲಾಗಿದೆ. ಆದರೆ ಈ ಎಲ್ಲ ಆರೋಪಗಳಲ್ಲಿ ಸಲ್ಮಾನ್ ತಪ್ಪಿತಸ್ಥನಲ್ಲ ಎಂದು ಕೋರ್ಟ್ ಹೇಳಿತ್ತು.

2002ರಲ್ಲಿ ಈ ಪ್ರಕರಣ ನಡೆದಿತ್ತು. ತಡರಾತ್ರಿಯಲ್ಲಿ ತಮ್ಮ ಲ್ಯಾಂಡ್‌ರೋವರ್ ಕಾರನ್ನು ಚಾಲನೆ ಮಾಡುತ್ತಿದ್ದ ವೇಳೆ ಸಲ್ಮಾನ್ ಖಾನ್ ಫುಟ್‌ಪಾತ್ ಮೇಲೆ ಮಲಗಿದ್ದವರ ಮೇಲೆ ಹರಿಸಿದ್ದರು. ಘಟನೆಯಲ್ಲಿ ಒಬ್ಬ ವ್ಯಕ್ತಿ ಸಾವಿಗೀಡಾಗಿದ್ದು, 4 ಜನ ಗಾಯಗೊಂಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement