ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಮೂಢನಂಬಿಕೆ ವಿರೋಧಿ ಹೋರಾಟಗಾರ ಡಾ.ದಾಭೋಳ್ಕರ್ ಹತ್ಯೆ

ಸಾಮಾಜಿಕ ಕಾರ್ಯಕರ್ತ ಹಾಗೂ ಮೂಢನಂಬಿಕೆ ವಿರೋಧಿ ಹೋರಾಟಗಾರ ಡಾ.ನರೇಂದ್ರ ದಾಭೋಳ್ಕರ್ ..

Lingaraj Badiger
Updated On : 20 Aug 2013, 3:49 am

ಪುಣೆ: ಸಾಮಾಜಿಕ ಕಾರ್ಯಕರ್ತ ಹಾಗೂ ಮೂಢನಂಬಿಕೆ ವಿರೋಧಿ ಹೋರಾಟಗಾರ ಡಾ.ನರೇಂದ್ರ ದಾಭೋಳ್ಕರ್ ಅವರನ್ನು ಮಂಗಳವಾರ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ.

ಇಂದು ಬೆಳಗ್ಗೆ ನಗರದ ಓಂಕಾರೇಶ್ವರ ಸೇತುವೆ ಬಳಿ ನೇರಂದ್ರ ದಾಭೋಳ್ಕರ್ ಅವರ ಮೃತ ದೇಹ ಪತ್ತೆಯಾಗಿದೆ. 'ಸಾಧನ' ಪತ್ರಿಕೆಯ ಸಂಪಾದಕರು ಆಗಿದ್ದ ದಾಭೋಳ್ಕರ್ ಅವರು ಮೂಢನಂಬಿಕೆ ವಿರೋಧಿ ಮಸೂದೆ ಪಾಸ್ ಮಾಡುವಂತೆ ಮಹಾರಾಷ್ಟ್ರ ಸರ್ಕಾರವನ್ನು ಆಗ್ರಹಿಸಿದ್ದರು.

ಪೊಲೀಸರು ದಾಭೋಳ್ಕರ್ ಹತ್ಯೆ ಪ್ರಕರಣವನ್ನು ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ. ಆದರೆ ಈವರೆಗೂ ಶಂಕಿತ ಆರೋಪಿಗಳ ಬಗ್ಗೆ ಯಾವುದೇ ಮಾಹಿತಿ ಸಿಕ್ಕಿಲ್ಲ ಎಂದು ಪುಣೆ ಪೊಲೀಸ್ ಆಯುಕ್ತ ಗುಲಾಬ್‌ರಾವ್ ಪೊಲ್ ಅವರು ತಿಳಿಸಿದ್ದಾರೆ.

ಜನರಲ್ಲಿ ಸಾಮಾಜಿಕ ಪರಿವರ್ತನೆ ಹಾಗೂ ವೈಜ್ಞಾನಿಕ ಮನೋಭಾವ ಬೆಳೆಸುವುದಕ್ಕಾಗಿ ದಾಭೋಳ್ಕರ್ ಅವರು 'ಅಂಧಶ್ರದ್ಧೆ ನಿರ್ಮೂಲನಾ ಸಮಿತಿ' ಸ್ಥಾಪಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement