ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಕೊಳ್ಳೇಗಾಲ ಅತ್ಯಾಚಾರ, ಕೊಲೆ ಪ್ರಕರಣ: ಗಲ್ಲು ಶಿಕ್ಷೆಗೆ ಸುಪ್ರೀಂ ತಡೆ

ಯುವತಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ್ದ ಕೊಳ್ಳೇಗಾಲದ ಶಿವು ಮತ್ತು ಜಡೇಸ್ವಾಮಿಯ ಗಲ್ಲು..

Lingaraj Badiger
Updated On : 21 Aug 2013, 6:25 am

ನವದೆಹಲಿ: ಯುವತಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ್ದ ಕೊಳ್ಳೇಗಾಲದ ಶಿವು ಮತ್ತು ಜಡೇಸ್ವಾಮಿಯ ಗಲ್ಲು ಶಿಕ್ಷೆಗೆ ಸುಪ್ರೀಂ ಕೋರ್ಟ್ ಬುಧವಾರ ತಡೆಯಾಜ್ಞೆ ನೀಡಿದೆ. ಈ ಇಬ್ಬರು ಅಪರಾಧಿಗಳಿಗೆ ನಾಳೆ ಬೆಳಗ್ಗೆ ಗಲ್ಲಿಗೇರಿಸಲು ಸಮಯ ನಿಗದಿಯಾಗಿತ್ತು. ಇದೀಗ ಸುಪ್ರೀಂ ಕೋರ್ಟ್ ತಡೆ ನೀಡಿರುವುದರಿಂದ ಗಲ್ಲು ಶಿಕ್ಷೆ ಮತ್ತಷ್ಟು ವಿಳಂಬವಾಗಲಿದೆ.

ಆರುವರೆ ವರ್ಷಗಳ ಬಳಿಕ ತಮ್ಮ ಕ್ಷಮಾದಾನದ ಅರ್ಜಿಯನ್ನು ತಿರಸ್ಕರಿಸಲಾಗಿರುವುದರಿಂದ ಗಲ್ಲು ಶಿಕ್ಷೆಯನ್ನು ಜೀವಾವಧಿ ಶಿಕ್ಷೆಗೆ ತಗ್ಗಿಸುವಂತೆ ಕೋರಿ ಇಬ್ಬರೂ ಅಪರಾಧಿಗಳು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಇಂದು ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪಿ.ಸದಾಶಿವಂ ಮತ್ತು ನ್ಯಾಯಮೂರ್ತಿ ರಂಜನ್ ಗೊಗೋಯ್ ಅವರನ್ನೊಳಗೊಂಡ ಸುಪ್ರೀ ಪೀಠ, ಗಲ್ಲು ಶಿಕ್ಷೆಗೆ ತಡೆಯಾಜ್ಞೆ ನೀಡಿ, ವಿಚಾರಣೆಯನ್ನು ನಾಲ್ಕು ವಾರಗಳ ಕಾಲ ಮುಂದೂಡಿದೆ.

ಈ ಮಧ್ಯೆ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ಗಲ್ಲು ಶಿಕ್ಷೆಗೆ ಗುರಿಯಾಗಿರು ಶಿವು ಇಂದು ಬೆಳಗ್ಗೆ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿ ನಡೆದಿದೆ. ಕೈ ಹಾಗೂ ಮರ್ಮಾಂಗ ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಶಿವುಗೆ ಹಿಂಡಲಗಾ ಜೈಲಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅಪರಾಧಿ ಶಿವು ಮರ್ಮಾಂಗಕ್ಕೆ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದ್ದು, ಮರ್ಮಾಂಗಕ್ಕೆ ನಾಲ್ಕು ಹೊಲಿಗೆ ಹಾಕಲಾಗಿದೆ ಎಂದು ಜೈಲು ಅಧಿಕಾರಿಗಳು ತಿಳಿಸಿದ್ದಾರೆ.

ಚಾಮರಾಜನಗರ ಜಿಲ್ಲೆ ಕೊಳ್ಳೆಗಾಲ ತಾಲೂಕಿನ ಭದ್ರಯ್ಯನಹಳ್ಳಿ ಗ್ರಾಮದ ಶಿವು ಮತ್ತು ಜಡೇಸ್ವಾಮಿ 19 ವರ್ಷದ ಯುವತಿ ಮೇಲೆ ಅತ್ಯಾಚಾರವೆಸಗಿ ನಂತರ ಕೊಲೆ ಮಾಡಿದ್ದರು. ಇಬ್ಬರಿಗೂ ಜಿಲ್ಲಾ ನ್ಯಾಯಾಲಯ ಗಲ್ಲು ಶಿಕ್ಷೆ ವಿಧಿಸಿತ್ತು. ನಂತರ ಸುಪ್ರೀಂ ಕೋರ್ಟ್ ಕೂಡ ಗಲ್ಲು ಶಿಕ್ಷೆಯನ್ನು ಎತ್ತಿ ಹಿಡಿದಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement