ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಲೈಂಗಿಕ ದೌರ್ಜನ್ಯ: ಅಸಾರಾಮ್ ಬಾಪು ವಿರುದ್ಧ ಕೇಸು

ಲೈಂಗಿಕ ದೌರ್ಜನ್ಯ ಆರೋಪದಡಿಯಲ್ಲಿ ದೇವಮಾನವ ಅಸಾರಾಮ್ ಬಾಪು ವಿರುದ್ಧ ದೆಹಲಿ ಪೊಲೀಸರು ಕೇಸು ದಾಖಲಿಸಿದ್ದಾರೆ...

Rashmi Kasaragodu
Updated On : 21 Aug 2013, 3:17 am

ನವದೆಹಲಿ: ಲೈಂಗಿಕ ದೌರ್ಜನ್ಯ ಆರೋಪದಡಿಯಲ್ಲಿ ದೇವಮಾನವ ಅಸಾರಾಮ್ ಬಾಪು ವಿರುದ್ಧ ದೆಹಲಿ ಪೊಲೀಸರು ಕೇಸು ದಾಖಲಿಸಿದ್ದಾರೆ.

ರಾಜಸ್ತಾನದ ಜೋಧಾಪುರ್‌ನಲ್ಲಿರುವ ಆಶ್ರಮದಲ್ಲಿ ಬಾಪು ತನ್ನನ್ನು ಲೈಂಗಿಕ ದೌರ್ಜನ್ಯಕ್ಕೊಳಪಡಿಸಿದ್ದಾರೆ ಎಂದು ಹದಿಹರೆಯದ ಹುಡುಗಿಯೊಬ್ಬಳು ದೂರು ನೀಡಿರುವ ಹಿನ್ನೆಲೆಯಲ್ಲಿ ಕೇಸು ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಲೈಂಗಿಕ ದೌರ್ಜನ್ಯಕ್ಕೊಳಗಾದ ಹುಡುಗಿ ಮಂಗಳವಾರ ಸಂಜೆ ಸೆಂಟ್ರಲ್ ದೆಹಲಿಯ ಕಮಲಾ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಲಿಖಿತ ದೂರು ನೀಡಿದ್ದಳು. ಆ ಪ್ರಕಾರ ನಾವು ಪ್ರಕರಣ ದಾಖಲಿಸಿದ್ದರೂ, ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆದದ್ದು ರಾಜಸ್ತಾನದಲ್ಲಾಗಿರುವುದರಿಂದ ಪ್ರಕರಣವನ್ನು ರಾಜಸ್ತಾನ ಪೊಲೀಸರಿಗೆ ಹಸ್ತಾಂತರಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಸ್ವಯಂಘೋಷಿತ ದೇವಮಾನವ ಅಸಾರಾಮ್ ಬಾಪು ಈ ಹಿಂದೆಯೂ ವಿವಾದಗಳಿಂದ ಸುದ್ದಿಯಾಗಿದ್ದರು.

ಕಳೆದ ವರ್ಷ ಡಿಸೆಂಬರ್ 16ರಂದು ದೆಹಲಿಯಲ್ಲಿ ಯುವತಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರದ ಬಗ್ಗೆ ಮಾತನಾಡಿದ ಬಾಪು, ಅತ್ಯಾಚಾರಕ್ಕೊಳಗಾದ ಯುವತಿ ಅತ್ಯಾಚಾರ ಮಾಡುವವರಲ್ಲಿ ಅಣ್ಣಾ ನನ್ನನ್ನು ಬಿಟ್ಟು ಬಿಡಿ ಎಂದು ಗೋಗರೆದಿದ್ದರೆ, ಅವಳು ಅತ್ಯಾಚಾರಗೊಳಗಾಗುತ್ತಿರಲಿಲ್ಲ ಎಂಬ ವಿವಾದಾತ್ಮಕ ಹೇಳಿಕೆ ನೀಡಿ ಟೀಕೆಗೆ ಗುರಿಯಾಗಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement