ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

'ಲೋಕಸಭೆ ಉಪ ಸಮರ' ನೀರಸ ಅಂತ್ಯ: ಶೇ.43ರಷ್ಟು ಮತದಾನ

ಬೆಂಗಳೂರು ಗ್ರಾಮಾಂತರ ಹಾಗೂ ಮಂಡ್ಯ ಲೋಕಸಭೆ ಉಪ ಚುನಾವಣೆ ನೀರಸ ಅಂತ್ಯ ಕಂಡಿದೆ...

Lingaraj Badiger
Updated On : 21 Aug 2013, 6:22 am

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಹಾಗೂ ಮಂಡ್ಯ ಲೋಕಸಭೆ ಉಪ ಚುನಾವಣೆ ನೀರಸ ಅಂತ್ಯ ಕಂಡಿದೆ. ಇಂದು ಸಂಜೆ 5.30ಕ್ಕೆ ಮತದಾನ ಮುಕ್ತಾಯಗೊಂಡಿದ್ದು, ಬೆಂಗಳೂರು ಗ್ರಾಮಾಂತರದಲ್ಲಿ ಶೇ.40ರಷ್ಟು ಹಾಗೂ ಮಂಡ್ಯದಲ್ಲಿ ಶೇ.43.ರಷ್ಟು ಮತದಾನವಾಗಿದೆ.

ಎರಡು ಕ್ಷೇತ್ರದಲ್ಲೂ ಮತದಾನ ಪ್ರಕ್ರಿಯೆಗೆ ಮತದಾರ ಅಷ್ಟಾಗಿ ಉತ್ಸಾಹ ತೋರಿಸಿಲ್ಲ.  ಕೆಲವು ಕಡೆ ಕಾಂಗ್ರೆಸ್-ಜೆಡಿಎಸ್ ಕಾರ್ಯಕರ್ತರ ಮಾತಿನ ಚಕಮಕಿ ಹೊರತುಪಡಿಸಿದರೆ, ಬಹುತೇಕ ಮತದಾನ ಪ್ರಕ್ರಿಯೆ ಶಾಂತಿಯುತವಾಗಿತ್ತು.

ಎರಡೂ ಕ್ಷೇತ್ರಗಳ 22 ಅಭ್ಯರ್ಥಿಗಳ ಭವಿಷ್ಯ ಮತಯಂತ್ರದಲ್ಲಿ ಭದ್ರವಾಗಿದ್ದು, ಆಗಸ್ಟ್ 24ರಂದು ಮತ ಎಣಿಕೆ ಕಾರ್ಯ ನಡೆಯಲಿದೆ.

ಇನ್ನು ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಅವರು ಇಂದು ಮದ್ದೂರಿನ ಸೋಮನಹಳ್ಳಿಯ ಮತಗಟ್ಟೆ ಸಂಖ್ಯೆ 69ರಲ್ಲಿ ತಮ್ಮ ಮತ ಚಲಾಯಿಸಿದರು. ಈ ವೇಳೆ ಮಾತನಾಡಿದ ಅವರು, ಇದು ವ್ಯಕ್ತಿಗಳ ನಡುವೆ ನಡೆಯುತ್ತಿರುವ ಚುನಾವಣೆಯಲ್ಲ. ಮೂರು ಪಕ್ಷಗ ಮಧ್ಯೆ ನಡೆಯುತ್ತಿರುವ ಚುನಾವಣೆ ಎಂದು ಹೇಳಿದ್ದಾರೆ. ಅಲ್ಲದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿಗೆ ಹೋಲಿಸುವುದು ಸರಿಯಲ್ಲ ಎಂದು ಹೇಳಿದರು.

ಪ್ರತಿಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಹಾಗೂ ಅವರ ಪತ್ನಿ ಮತ್ತು ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಅನಿತಾ ಕುಮಾರಸ್ವಾಮಿ ಅವರು ರಾಮನಗರದ ಕೇತಗಾನಹಳ್ಳಿಯಲ್ಲಿ ತಮ್ಮ ಮತ ಚಲಾಯಿಸಿದರು. ಇನ್ನು ವಸತಿ ಸಚಿವ ಅಂಬರೀಷ್ ಹಾಗೂ ಅವರ ಪತ್ನಿ ಸುಮಲತ ಅವರು ಮಂಡ್ಯದ ದೊಡ್ಡ ಅರಸೀಕೆರೆ ಮತಗಟ್ಟೆಯಲ್ಲಿ ಮತದಾನ ಮಾಡಿದರು.

ಕನಕಪುರದ ದೊಡ್ಡ ಆಲನಹಳ್ಳಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಸುರೇಶ್ ಅವರ ಸಹೋದರ ಹಾಗೂ ಕಾಂಗ್ರೆಸ್ ಮುಖಂಡ ಡಿ.ಕೆ.ಶಿವಕುಮಾರ್ ಮತ್ತು ಅವರ ಪತ್ನಿ ಉಷಾ ಮತದಾನ ಮಾಡಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement