ಬೆಂಗಳೂರಿನಲ್ಲಿ ಯುವತಿ ಮೇಲೆ ಗ್ಯಾಂಗ್ ರೇಪ್?
ನೆಲಮಂಗಲ ಸಮೀಪದ ಅರಿಶಿನಕುಂಟೆಯಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ ಎಂದು ಯುವತಿ..
ಬೆಂಗಳೂರು: ನೆಲಮಂಗಲ ಸಮೀಪದ ಅರಿಶಿನಕುಂಟೆಯಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ ಎಂದು ಯುವತಿ ಪೋಷಕರು ಆರೋಪಿಸಿದ್ದಾರೆ. ಅತ್ಯಾಚಾರಕ್ಕೆ ಒಳಗಾದ ಯುವತಿ ಈಗ ಪ್ರಜ್ಞಾಹೀನ ಸ್ಥತಿಯಲ್ಲಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಪ್ಯಾರಾಗಾನ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಯುವತಿ ಮೇಲೆ ಆಗಸ್ಟ್ 20ರ ತಡರಾತ್ರಿ ಅರಿಶಿನಕುಂಟೆಯ ಅಂಡರ್ಪಾಸ್ ಬಳಿ ಅಸ್ವಸ್ಥಳಾಗಿದ್ದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಯುವತಿಯನ್ನು ಬೆಂಗಳೂರಿನ ಸಪ್ತಗಿರಿ ಆಸ್ತತ್ರೆಗೆ ದಾಖಲಿಸಲಾಗಿದೆ.
ಸಹೋದ್ಯೋಗಿಗಳೇ ಯುವತಿ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಿರುವ ಪೋಷಕರು, ಈ ಸಂಬಂಧ ಪಟ್ಟಣ ಪೊಲೀಸ್ ಠಾಣೆಯಲ್ಲಿ ನಿನ್ನೆ ದೂರು ದಾಖಲಿಸಿದ್ದಾರೆ.
ಅತ್ಯಾಚಾರ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಈ ಸಂಬಂಧ ಯುವತಿಯ 20 ಸಹೋದ್ಯೋಗಿಗಳನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ಅಲ್ಲದೆ ಮೂವರು ಪ್ರಮುಖ ಆರೋಪಿಗಳನ್ನು ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ.