ಭಾರತದಲ್ಲಿ ಶಿಕ್ಷಣದ ಗುಣಮಟ್ಟ ಕಳಪೆಯಾಗಿದೆ: ಪಿತ್ರೋಡ
ಕೊಲ್ಕತಾ: ಭಾರತದಲ್ಲಿ ಶಿಕ್ಷಣದ ಗುಣಮಟ್ಟ ಕಳಪೆಯಾಗಿದೆ ಎಂದು ಪ್ರಧಾನ ಮಂತ್ರಿ ಮನಮೋಹನ್ ಸಿಂಗ್ ಅವರ ಮೂಲಸೌಕರ್ಯಗಳ ಹಿರಿಯ ಸಲಹೆಗಾರರಾದ ಸ್ಯಾಮ್ ಪಿತ್ರೋಡ ಗುರುವಾರ ಹೇಳಿದ್ದಾರೆ.
ಕೇವಲ ಐದು ವಿಶ್ವವಿದ್ಯಾಲಯಗಳನ್ನು ಹೊರತುಪಡಿಸಿ, ಇನ್ನುಳಿದಂತ ಶಿಕ್ಷಣ ಮಂಡಳಿಯನ್ನು ಪರಿಗಣಿಸಿದರೆ ಭಾರತದಲ್ಲಿ ಶಿಕ್ಷಣದ ಗುಣಮಟ್ಟ ಕಳೆಪೆಯಾಗಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ಪ್ರೆಸಿಡೆನ್ಸಿ ವಿಶ್ವವಿದ್ಯಾಲಯದಲ್ಲಿ ಆಯೋಜಿಸಲಾಗಿದ್ದ ಘಟಿಕೋತ್ಸವ ಸಮಾರಂಭದಲ್ಲಿ ಮಾತನಾಡಿದ ಅವರು, ದೇಶ ಶಿಕ್ಷಣ ಕ್ಷೇತ್ರದಲ್ಲಿ ಬಡತನ ಹೊಂದಿದೆ. ಕೇವಲ ಐದು ವಿಶ್ವವಿದ್ಯಾಲಯಗಳನ್ನು ಹೊರತು ಪಡಿಸಿದರೆ, ಉಳಿದಂತ ಶಿಕ್ಷಣ ಮಂಡಳಿಗಳು ಮಕ್ಕಳಿಗೆ ಸರಿಯಾದ ಶಿಕ್ಷಣ ನೀಡುವಲ್ಲಿ ಹಿಂದುಳಿದಿದೆ ಎಂದು ಹೇಳಿದ್ದಾರೆ.