ಮತ್ತೆ ಗಡಿಯಲ್ಲಿ ಗುಂಡಿನ ಸದ್ದು
ಮತ್ತೆ ಕದನ ವಿರಾಮ ಉಲ್ಲಂಘಿಸಿರುವ ಪಾಕಿಸ್ತಾನ ಸೇನಾ ಪಡೆ, ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ..
ಜಮ್ಮು: ಮತ್ತೆ ಕದನ ವಿರಾಮ ಉಲ್ಲಂಘಿಸಿರುವ ಪಾಕಿಸ್ತಾನ ಸೇನಾ ಪಡೆ, ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆ(ಎಲ್ಒಸಿ) ಬಳಿ ಗುರುವಾರ ಅಪ್ರಚೋದಿತ ದಾಳಿ ನಡೆಸಿದೆ.
ಪೂಂಚ್ ಜಿಲ್ಲೆಯಲ್ಲಿ ಭಾರತೀಯ ಸೇನಾ ಪಡೆಯ ಮೇಲೆ ಪಾಕ್ ಸೈನಿಕರು ಇಂದು ಮಧ್ಯಾಹ್ನ 12 ಗಂಟೆಯ ಸುಮಾರಿಗೆ ಗುಂಡಿನ ದಾಳಿ ನಡೆಸಿರುವುದಾಗಿ ರಕ್ಷಣಾ ಮೂಲಗಳು ತಿಳಿಸಿವೆ.
ಸಣ್ಣ ಮತ್ತು ಸ್ವಯಂಚಾಲಿತ ಶಸ್ತ್ರಾಸ್ತ್ರಗಳಿಂದ ಪಾಕ್ ಪಡೆ ಗುಂಡಿನ ದಾಳಿ ನಡೆಸಿದ್ದು, ದಾಳಿಯಲ್ಲಿ ಯಾವುದೇ ಜೀವ ಹಾನಿ ಅಥವಾ ಯಾವುದೇ ಸೈನಿಕರು ಗಾಯಗೊಂಡಿಲ್ಲ ಎಂದು ರಕ್ಷಣಾ ವಕ್ತಾರ ಕರ್ನಲ್ ಆರ್.ಕೆ.ಪಲ್ಟಾ ಅವರು ಹೇಳಿದ್ದಾರೆ.
ಗಡಿ ನಿಯಂತ್ರಣ ರೇಖೆಯ ಬಳಿ ನಿರಂತರವಾಗಿ ಗುಂಡಿನ ಚಕಮಕಿ ನಡೆಯುತ್ತಿದ್ದು, ಪಾಕ್ ಪದೇಪದೆ ನಡೆಸುತ್ತಿರುವ ಅಪ್ರಚೋದಿತ ದಾಳಿಗೆ ಭಾರತ ಪ್ರತ್ಯುತ್ತರ ನೀಡುತ್ತಿದೆ ಎಂದು ಅವರು ತಿಳಿಸಿದ್ದಾರೆ.