ಶಿವಕಾಶಿ ಪಟಾಕಿ ಮಳಿಗೆಯಲ್ಲಿ ಬೆಂಕಿ
ಚೆನ್ನೈ: ತಮಿಳುನಾಡಿನ ಶಿವಕಾಶಿಯಲ್ಲಿರುವ ಎರಡು ಪಟಾಕಿ ಮಳಿಗೆ ಗುರುವಾರ ಬೆಂಕಿಗಾಹುತಿಯಾಗಿದ್ದು, ಪ್ರಾಣಹಾನಿ ಬಗ್ಗೆ ವರದಿಯಾಗಿಲ್ಲ.
ತಮಿಳುನಾಡಿನ ಶಿವಕಾಶಿ ಸಮೀಪದಲ್ಲಿರುವ ಚಿದಂಬರಂ ಪಟಾಕಿ ಮಳಿಗೆಯಲ್ಲಿ ಇದ್ದಕ್ಕಿದ್ದಂತೆ ಬೆಂಕಿ ತಗುಲಿ, ಅಲ್ಲಿದ್ದ ಪಟಾಕಿಗಳು ಸ್ಫೋಟಗೊಂಡ ಪರಿಣಾಮ ಪಕ್ಕದಲ್ಲಿದ್ದ ಕೃಷ್ಣಸ್ವಾಮಿ ಪಟಾಕಿ ಮಳಿಗೆಯೂ ಬೆಂಕಿಗಾಹುತಿಯಾಗಿದೆ ಎಂದು ಮೂಲಗಳು ತಿಳಿಸಿವೆ.
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಮೂರು ಅಗ್ನಿ ಶಾಮಕ ದಳ ಬೆಂಕಿ ನಂದಿಸುತ್ತಿದ್ದಾರೆ. ಘಟನೆಯಲ್ಲಿ 50 ವರ್ಷದ ಮಹಿಳೆ ಗಾಯಗೊಂಡಿದ್ದು, ಪ್ರಾಣಾಹಾನಿ ಬಗ್ಗೆ ಯಾವುದೇ ವರದಿಯಾಗಿಲ್ಲ ಎಂದು ಅಗ್ನಿ ಶಾಮಕ ದಳದ ಅಧಿಕಾರಿ ತಿಳಿಸಿದ್ದಾರೆ.