ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಅಸಾರಾಮ್ ವಿರುದ್ಧ ದಾಖಲಿಸಿರುವ ಎಫ್‌ಐಆರ್ ರದ್ದತಿಗೆ ಆಗ್ರಹ

Mainashree
Updated On : 23 Aug 2013, 5:06 am

ನವದೆಹಲಿ: ಲೈಂಗಿಕ ದೌರ್ಜನ್ಯ ಆರೋಪ ಹೊತ್ತಿರುವ ಧಾರ್ಮಿಕ ನಾಯಕ ಅಸಾರಾಮ್ ಬಾಪು ವಿರುದ್ಧ ದಾಖಲಿಸಿರುವ ಎಫ್‌ಐಆರ್ ರದ್ದುಗೊಳಿಸಿ ಎಂದು ಅಸಾರಾಮ್ ಬಾಪುವಿನ 500 ಬೆಂಬಲಿಗರು ಶುಕ್ರವಾರ ಆಗ್ರಹಿಸಿದ್ದಾರೆ.

ಇಂದು ನವದೆಹಲಿಗೆ ಆಗಮಿಸಿದ ಅಸಾರಾಮ್ ಬಾಪು ಬೆಂಬಲಿಗರು ಪ್ರತಿಭಟನೆ ನಡೆಸಿದ್ದು, ಬಾಪು ವಿರುದ್ಧ ದಾಖಲಿಸಿರುವ ಎಫ್‌ಐಆರ್ ರದ್ದುಗೊಳಿಸಿ. ಅವರ ಮೇಲೆ ಸುಳ್ಳು ಆರೋಪ ಮಾಡಲಾಗಿದೆ ಎಂದು ಹೇಳಿದ್ದಾರೆ.

ಇಂದು ಬೆಳಿಗ್ಗೆ 10 ಗಂಟೆಗೆ ದೆಹಲಿಯ ಕಮಲ್ ಮಾರುಕಟ್ಟೆ ಪೊಲೀಸ್ ಠಾಣೆ ಮುಂದೆ ಹಾಜರಾಗಿದ್ದ ಸುಮಾರು 500 ಬೆಂಬಲಿಗರು ಧಾರ್ಮಿಕ ಗುರುಗಳಾದ ಅಸಾರಾಮ್ ಬಾಪು ಅವರ ಹೆಸರಿಗೆ ಮಸಿ ಬಳಿಯುವ ಕೆಲಸ ಮಾಡಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಾಪು ವಿರುದ್ಧ ದಾಖಲಿಸಿರುವ ಎಫ್‌ಐಆರ್ ರದ್ದುಗೊಳಿಸದಿದ್ದರೆ ಉಗ್ರ ಹೋರಾಟ ನಡೆಸಲಾಗುವುದು ಎಂದ ಅವರು, ತದ ನಂತರ ಜಂತರ್‌ಮಂತರ್‌ವರೆಗೆ ಪೊಲೀಸರ ವಿರುದ್ಧ ಘೋಷಣೆ ಕೂಗುತ್ತಾ ಪ್ರತಿಭಟನಾ ರ್ಯಾಲಿ ನಡೆಸಿದರು.

ಜೋಧ್‌ಪುರದಲ್ಲಿ ಆಸಾರಾಮ್ ಟ್ರಸ್ಟ್ ನಡೆಸುತ್ತಿರುವ ಹಾಸ್ಟೆಲ್‌ನಲ್ಲಿರುವ 15 ವರ್ಷದ ಬಾಲಿಕಿಯೊಬ್ಬಳು ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ಧಾರ್ಮಿಕ ಗುರು ಅಸಾರಾಮ್ ಬಾಪು ವಿರುದ್ಧ ದೆಹಲಿ ಪೊಲೀಸರಿಗೆ ದೂರು ನೀಡಿದ್ದಳು. ರಾಜಸ್ಥಾನದಲ್ಲಿ ಜೀವ ಭಯವಿದ್ದುದರಿಂದ ಇಲ್ಲಿಗೆ ಬರಬೇಕಾಯಿತು ಎಂದು ಆಕೆಯ ತಂದೆ ಹೇಳಿದ್ದರು. ದೂರು ದಾಖಲಿಸಿಕೊಂಡಿದ್ದ ದೆಹಲಿ ಪೊಲೀಸರು ಪ್ರಕರಣವನ್ನು ರಾಜಸ್ಥಾನಕ್ಕೆ ವರ್ಗಾಯಿಸಿದ್ದರು.

ಸ್ವಯಂಘೋಷಿತ ದೇವಮಾನವ ಅಸಾರಾಮ್ ಬಾಪು ಈ ಹಿಂದೆಯೂ ವಿವಾದಗಳಿಂದ ಸುದ್ದಿಯಾಗಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement