ಜೆಡಿಎಸ್-ಬಿಜೆಪಿ ಮೈತ್ರಿಯನ್ನು ಜನ ಧಿಕ್ಕರಿಸಿದ್ದಾರೆ: ಸಿಎಂ
ಬೆಂಗಳೂರು ಗ್ರಾಮಾಂತರ ಹಾಗೂ ಮಂಡ್ಯ ಲೋಕಸಭಾ ಚುನಾವಣೆಯ ಫಲಿತಾಂಶದ ಬಗ್ಗೆ ಪ್ರತಿಕ್ರಿಯಿಸಿರುವ..
ಬೆಂಗಳೂರು: ಬೆಂಗಳೂರು ಗ್ರಾಮಾಂತರ ಹಾಗೂ ಮಂಡ್ಯ ಲೋಕಸಭಾ ಚುನಾವಣೆಯ ಫಲಿತಾಂಶದ ಬಗ್ಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಸಿದ್ದರಾಮ್ಯ ಅವರು, ಜನ ಜೆಡಿಎಸ್-ಕಾಂಗ್ರೆಸ್ ಮೈತ್ರಿಯನ್ನು ಧಿಕ್ಕರಿಸಿದ್ದಾರೆ ಎಂದು ಶನಿವಾರ ಹೇಳಿದ್ದಾರೆ.
ಬೆಂಗಳೂರು ಗ್ರಾಮಾಂತರ ಹಾಗೂ ಮಂಡ್ಯ ಜನತೆ ಸರ್ಕಾರದ ಒಳ್ಳೆಯ ಕೆಲಸಕ್ಕೆ ಮತ ನೀಡಿದ್ದಾರೆ. ಇದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರೊಂದಿಗಿನ ಸಂಘರ್ಷ ಅಲ್ಲ ಎಂದು ಸಿಎಂ ತಿಳಿಸಿದ್ದಾರೆ.
ಇದೇ ವೇಳೆ, ಬೆಂಗಳೂರು ಗ್ರಾಮಾಂತರದಲ್ಲಿ ಕಾಂಗ್ರೆಸ್ನ್ನು ಗೆಲ್ಲಿಸಿದ ಡಿ.ಕೆ.ಶಿವಕುಮಾರ್ ಅವರಿಗೆ ಸಚಿವ ಸ್ಥಾನ ನೀಡುತ್ತಿರಾ? ಎಂಬ ವರದಿಗಾರರ ಪ್ರಶ್ನೆಗೆ ಉತ್ತರಿಸಿದ ಸಿಎಂ, ಈ ಬಗ್ಗೆ ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳಲಿದೆ ಎಂದರು.
ಇನ್ನು ಉಪ ಚುನಾವಣೆಯ ಫಲಿತಾಂಶದ ಬಗ್ಗೆ ಪ್ರತಿಕ್ರಿಯಿಸಿರು ರಾಜ್ಯ ಕಾಂಗ್ರೆಸ್ ಉಸ್ತುವಾರಿ ದಿಗ್ವಿಜಯ್ ಸಿಂಗ್ ಅವರು, ದೇವೇಗೌಡರು ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳಬಾರದಿತ್ತು ಎಂದಿದ್ದಾರೆ.