ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಅಸಾರಾಮ್ ಬಾಪುಗೆ ಸಮನ್ಸ್ ಜಾರಿ

ಲೈಂಕಿಗ ಕಿರುಕುಳ ನೀಡಿದ ಆರೋಪದ ಮೇಲೆ ಧಾರ್ಮಿಕ ಗುರು ಅಸರಾಮ್ ಬಾಪುಗೆ ಜೋಧ್‌ಪುರ್ ಪೊಲೀಸರು ಸೋಮವಾರ...

Mainashree
Updated On : 26 Aug 2013, 1:48 am

ಜೋಧ್‌ಪುರ್: ಲೈಂಕಿಗ ಕಿರುಕುಳ ನೀಡಿದ ಆರೋಪದ ಮೇಲೆ ಧಾರ್ಮಿಕ ಗುರು ಅಸರಾಮ್ ಬಾಪುಗೆ ಜೋಧ್‌ಪುರ್ ಪೊಲೀಸರು ಸೋಮವಾರ ಸಮನ್ಸ್ ಜಾರಿ ಮಾಡಿದ್ದಾರೆ.

ನಾಲ್ಕು ದಿನದೊಳಗಾಗಿ ಪೊಲೀಸರ ಮುಂದೆ ವಿಚಾರಣೆಗೆ ಹಾಜರಾಗಬೇಕು ಎಂದು ಜೋಧ್‌ಪುರ್ ಪೊಲೀಸರು ಹೇಳಿದ್ದಾರೆ.

ಜೋಧ್‌ಪುರದಲ್ಲಿ ಅಸಾರಾಮ್ ಟ್ರಸ್ಟ್ ನಡೆಸುತ್ತಿರುವ ಹಾಸ್ಟೆಲ್‌ನಲ್ಲಿರುವ 15 ವರ್ಷದ ಬಾಲಕಿಯೊಬ್ಬಳು ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ಧಾರ್ಮಿಕ ಗುರು ಅಸಾರಾಮ್ ಬಾಪು ವಿರುದ್ಧ ದೆಹಲಿ ಪೊಲೀಸರಿಗೆ ದೂರು ನೀಡಿದ್ದಳು. ರಾಜಸ್ಥಾನದಲ್ಲಿ ಜೀವ ಭಯವಿದ್ದುದ್ದರಿಂದ ಇಲ್ಲಿಗೆ ಬರಬೇಕಾಯಿತು ಎಂದು ಆಕೆಯ ತಂದೆ ಹೇಳಿದ್ದರು. ದೂರು ದಾಖಲಿಸಿಕೊಂಡಿದ್ದ ದೆಹಲಿ ಪೊಲೀಸರು ಪ್ರಕರಣವನ್ನು ರಾಜಸ್ಥಾನಕ್ಕೆ ವರ್ಗಾಯಿಸಿದ್ದರು.

ಈ ಸಂಬಂಧ ಜೋಧ್‌ಪುರ್ ಪೊಲೀಸರು ಎಫ್‌ಐಆರ್ ದಾಖಲಿಸಿದ್ದು, ಬಾಪುಗೆ ಸಮನ್ಸ್ ಜಾರಿ ಮಾಡಿದ್ದಾರೆ. ಪೊಲೀಸರು ತಮ್ಮ ಬಳಿ ಬರುವ ಮುನ್ನವೇ, ಪೊಲೀಸರ ಮುಂದೆ ವಿಚಾರಣೆಗಾಗಿ ಹಾಜರಾಗಬೇಕು ಎಂದು ನಾಲ್ಕು ದಿನದ ಗಡುವು ನೀಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement