ರಮ್ಯ, ಡಿ.ಕೆ.ಸುರೇಶ್, ಸಂಸದರಾಗಿ ಪ್ರಮಾಣ ಸ್ವೀಕಾರ
ಇತ್ತಿಚೀಗೆ ಬೆಂಗಳೂರು ಗ್ರಾಮಾಂತರ ಹಾಗೂ ಮಂಡ್ಯ ಲೋಕಸಭೆ ಉಪ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ್ದ ನಟಿ..
ನವದೆಹಲಿ: ಇತ್ತಿಚೀಗೆ ಬೆಂಗಳೂರು ಗ್ರಾಮಾಂತರ ಹಾಗೂ ಮಂಡ್ಯ ಲೋಕಸಭೆ ಉಪ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ್ದ ನಟಿ ರಮ್ಯ ಹಾಗೂ ಡಿ.ಕೆ.ಸುರೇಶ್ ಅವರು ಸಂಸದರಾಗಿ ಸೋಮವಾರ ಪ್ರಮಾಣ ವಚನ ಸ್ವೀಕರಿಸಿದರು.
ಲೋಕಸಭಾ ಸ್ಪೀಕರ್ ಮೀರಾ ಕುಮಾರ್ ಅವರು ನೂತನ ಸಂಸದರಿಗೆ ಪ್ರಮಾಣ ವಚನ ಬೋಧಿಸಿದರು. ರಮ್ಯ ಹಾಗೂ ಡಿಕೆ ಸುರೇಶ್ ಇಬ್ಬರೂ ದೇವರ ಹೆಸರನಲ್ಲಿ ಕನ್ನಡದಲ್ಲೇ ಪ್ರತಿಜ್ಞಾವಿಧಿ ಸ್ವೀಕರಿಸಿದರು.
ರಾಜ್ಯಸಭಾ ಸದಸ್ಯರಾಗಿ ಹರಿಪ್ರಸಾದ್ ಪ್ರಮಾಣ
ಮೂರನೇ ಬಾರಿಗೆ ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾಗಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ಬಿ.ಕೆ.ಹರಿಪ್ರಸಾದ್ ಅವರು ಸಹ ಇಂದು ರಾಜ್ಯಸಭೆಯ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು.
ಇತ್ತಿಚೀಗೆ ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಚುನಾವಣೆಯಲ್ಲಿ ಹರಿಪ್ರಸಾದ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದರು.