ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ವಕೀಲರ-ಪತ್ರಕರ್ತರ ಸಂಘರ್ಷ ಪ್ರಕರಣ: ಸಿಬಿಐ ತನಿಖೆಗೆ ಸುಪ್ರೀಂ ಆದೇಶ

ಬೆಂಗಳೂರಿನ ಸಿವಿಲ್ ಕೋರ್ಟ್ ಆವರಣದಲ್ಲಿ ನಡೆದ ವಕೀಲರ ಮತ್ತು ಪತ್ರಕರ್ತರ ನಡುವಿನ ಸಂಘರ್ಷದ ಪ್ರಕರಣವನ್ನು..

Lingaraj Badiger
Updated On : 27 Aug 2013, 12:44 pm

ಬೆಂಗಳೂರು: ಬೆಂಗಳೂರಿನ ಸಿವಿಲ್ ಕೋರ್ಟ್ ಆವರಣದಲ್ಲಿ ನಡೆದ ವಕೀಲರ ಮತ್ತು ಪತ್ರಕರ್ತರ ನಡುವಿನ ಸಂಘರ್ಷದ ಪ್ರಕರಣವನ್ನು ಮಂಗಳವಾರ ಸುಪ್ರೀಂ ಕೋರ್ಟ್ ಸಿಬಿಐ ತನಿಖೆಗೆ ಒಪ್ಪಿಸಿದೆ.

ಪ್ರಕರಣ ಕುರಿತು ರಾಜ್ಯ ಸರ್ಕಾರ ಮತ್ತು ವಕೀಲರ ಸಂಘದ ವಾದ ಆಲಿಸಿದ್ದ ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಪಿ.ಸದಾಶಿವಂ ಅವರ ಪೀಠ, ಆದೇಶವನ್ನು ಕಾಯ್ದಿರಿಸಿತ್ತು. ಇಂದು ತನ್ನ ಆದೇಶ ಪ್ರಕಟಿಸಿರುವ ಸುಪ್ರೀಂ ಕೋರ್ಟ್, ಪ್ರಕರಣದ ಕುರಿತು ತನಿಖೆ ನಡೆಸುವಂತೆ ಸಿಬಿಐಗೆ ಸೂಚಿಸಿದೆ.

ಈ ಪ್ರಕರಣ ಕುರಿತು ಕರ್ನಾಟಕ, ಕೇರಳ ಮತ್ತು ತಮಿಳುನಾಡಿನ ಹೆಚ್ಚುವರಿ ಡಿಜಿಪಿಗಳು ಹಾಗೂ ಹಲಸೂರು ಗೇಟ್ ಠಾಣೆ ಸಬ್‌ಇನ್ಸ್‌ಪೆಕ್ಟರ್ ಸೇರಿದಂತೆ ನಾಲ್ವರು ಅಧಿಕಾರಿಗಳ ತಂಡ ರಚಿಸಿ, ತನಿಖೆ ನಡೆಸಲು ಸುಪ್ರೀಂ ಸೂಚಿಸಿತ್ತು. ಆದರೆ, ರಾಜ್ಯ ಸರ್ಕಾರ ತನಿಖಾ ತಂಡ ರಚನೆಗೆ ಉತ್ಸಾಹ ತೋರಿರಲಿಲ್ಲ. ಈ ಹಿನ್ನೆಲೆಯಲ್ಲಿ ವಕೀಲರ ಸಂಘ ಪ್ರಕರಣ ತನಿಖೆಯನ್ನು ಸಿಬಿಐಗೆ ಒಪ್ಪಿಸುವಂತೆ ಕೋರಿ ಅರ್ಜಿ ಸಲ್ಲಿಸಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement