ಪಕ್ಷ ಬಯಸಿದರೆ ಮಾತ್ರ ಲೋಕಸಭೆಗೆ ಸ್ಪರ್ಧೆ: ದಿಗ್ವಿಜಯ್ ಸಿಂಗ್
ನವದೆಹಲಿ: ಈ ವರ್ಷ ನಡೆಯುವ ಮಧ್ಯಪ್ರದೇಶ ವಿಧಾನಸಭೆ ಚುನಾವಣೆಗೆ ತಾವು ಸ್ಪರ್ಧಿಸುವುದಿಲ್ಲ ಎಂದು ಸ್ಪಷ್ಟಪಡಿಸಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿಗ್ವಿಜಯ್ ಸಿಂಗ್ ಅವರು, ಪಕ್ಷ ಬಯಸಿದರೆ ಮಾತ್ರ ತಾವು ಮುಂಬರುವ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವುದಾಗಿ ಗುರುವಾರ ಹೇಳಿದ್ದಾರೆ.
ರಾಜ್ಯ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸುವ ಯೋಚೆನೆ ತಮಗೆ ಇಲ್ಲ. ಒಂದು ವೇಳೆ ಪಕ್ಷ ಅವಕಾಶ ನೀಡಿದರೆ ಲೋಕಸಭೆ ಚುನಾವಣೆಗೆ ಸ್ಪರ್ಧಿಸುತ್ತೇನೆ ಎಂದು ದಿಗ್ವಿಜಯ್ ಸಿಂಗ್ ವರದಿಗಾರರಿಗೆ ತಿಳಿಸಿದ್ದಾರೆ.
ನಾನು ಆರ್ಎಸ್ಎಸ್ ಬಗ್ಗೆ ಹೇಳಿಕೆ ನೀಡಿದಾಗೆಲ್ಲ ಹಲವು ಟೀಕೆಗಳನ್ನು ಎದುರಿಸಿದ್ದೇನೆ. ಆದರೆ ನಂತರ ನಾನು ಹೇಳಿದ್ದೆಲ್ಲ ನಿಜ ಎಂದು ಸಾಬೀತು ಮಾಡಿದ್ದೇನೆ ಎಂದು ಸಿಂಗ್ ಹೇಳಿದರು.
ಇದೇ ವೇಳೆ ಮಧ್ಯಪ್ರದೇಶ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಸಿಂಗ್, 2003ರ ವಿಧಾನಸಭೆ ಚುನಾವಣೆಯಲ್ಲಿ ನೀಡಿದ್ದ ಭರವಸೆಗಳನ್ನು ಇಲ್ಲಿಯವರೆಗೂ ಬಿಜೆಪಿ ಈಡೇರಿಸಿಲ್ಲ ಎಂದರು.