ಕೊಲ್ಕತ್ತಾದಲ್ಲಿ ಕಚ್ಚಾ ಬಾಂಬ್ ಸ್ಫೋಟ, ಓರ್ವನಿಗೆ ಗಾಯ
ಕೊಲ್ಕತ್ತಾದಲ್ಲಿ ಶುಕ್ರವಾರ ಮಧ್ಯಾಹ್ನ ಕಚ್ಚಾ ಬಾಂಬ್ ಸ್ಫೋಟಗೊಂಡಿದ್ದು, ಘಟನೆಯಲ್ಲಿ ಓರ್ವ ತೀವ್ರವಾಗಿ ಗಾಯಗೊಂಡಿದ್ದಾನೆ ಎಂದು ..
ಕೊಲ್ಕತ್ತಾ: ಕೊಲ್ಕತ್ತಾದಲ್ಲಿ ಶುಕ್ರವಾರ ಮಧ್ಯಾಹ್ನ ಕಚ್ಚಾ ಬಾಂಬ್ ಸ್ಫೋಟಗೊಂಡಿದ್ದು, ಘಟನೆಯಲ್ಲಿ ಓರ್ವ ತೀವ್ರವಾಗಿ ಗಾಯಗೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಕೊಲ್ಕತ್ತಾದ ಚಾಂದಿನಿ ಚೌಕ್ನಲ್ಲಿರುವ ಮಾಲ್ವೊಂದರ ಬಳಿ ಈ ಬಾಂಬ್ ಸ್ಫೋಟ ಸಂಭವಿಸಿದ್ದು, ಮಾಲ್ ಹೊರಗಡೆ ಟಿಫನ್ ಬಾಕ್ಸ್ನಲ್ಲಿ ಮತ್ತೆ ಎರಡು ಬಾಂಬ್ಗಳು ಪತ್ತೆಯಾಗಿವೆ. ತಕ್ಷಣ ಸ್ಥಳಕ್ಕೆ ಆಗಮಿಸಿದ ಪೊಲೀಸರು ಹಾಗೂ ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿ ಅವುಗಳನ್ನು ನಿಷ್ಕ್ರಿಯಗೊಳಿಸಿದ್ದಾರೆ.
ಇದು ಕಡಿಮೆ ತೀವ್ರತೆಯ ಸ್ಫೋಟವಾಗಿದ್ದರಿಂದ ಯಾವುದೇ ಸಾವು ಸಂಭವಿಸಿಲ್ಲ. ಆದರೆ ಜನರಲ್ಲಿ ಭೀತಿ ಹುಟ್ಟಿಸಿದ್ದು, ಘಟನೆಯ ಕುರಿತು ಪ್ರಾಥಮಿಕ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.