ಗಡಿಯೊಳಗೆ ನುಸುಳುತ್ತಿದ್ದ ಐವರು ಉಗ್ರರ ಹತ್ಯೆ
ನಿನ್ನೆಯಷ್ಟೆ ಐವರು ಉಗ್ರರನ್ನು ಹತ್ಯೆ ಮಾಡಿದ್ದ ಭಾರತೀಯ ಯೋಧರು, ಇಂದು ಮತ್ತೆ ಐವರು ಉಗ್ರರನ್ನು ಹತ್ಯೆ ಮಾಡಿದ್ದಾರೆ.
ಶ್ರೀನಗರ: ನಿನ್ನೆಯಷ್ಟೆ ಐವರು ಉಗ್ರರನ್ನು ಹತ್ಯೆ ಮಾಡಿದ್ದ ಭಾರತೀಯ ಯೋಧರು, ಇಂದು ಮತ್ತೆ ಐವರು ಉಗ್ರರನ್ನು ಹತ್ಯೆ ಮಾಡಿದ್ದಾರೆ.
ಇಲ್ಲಿಂದ 185 ಕಿ.ಮಿ.ದೂರದಲ್ಲಿರುವ ಕುಪ್ವಾರ ಜಿಲ್ಲೆಯ ಗಡಿ ನಿಯಂತ್ರಣ ರೇಖೆ(ಎಲ್ಒಸಿ)ಯ ಬಳಿ ಒಳ ನುಸುಳಲು ಯತ್ನಿಸುತ್ತಿದ್ದ ಐವರು ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಸೇನಾ ಅಧಿಕಾರಿಗಳು ತಿಳಿಸಿದ್ದಾರೆ.
ಅಕ್ರಮವಾಗಿ ಒಳ ನುಸುಳುತ್ತಿದ್ದ ಉಗ್ರರು ಯೋಧರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಅದಕ್ಕೆ ತಕ್ಕ ಪ್ರತ್ಯುತ್ತರ ನೀಡಿದ ಭಾರತೀಯ ಸೈನಿಕರು ಉಗ್ರರನ್ನು ಹತ್ಯೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.
ಒಟ್ಟು ಆರು ಉಗ್ರರು ಗಡಿಯೊಳಗೆ ನುಸುಳಿದ್ದಾರೆ ಎಂಬ ಮಾಹಿತಿ ಇದ್ದು, ಈವರೆಗೆ ಐವರು ಉಗ್ರರನ್ನು ಹತ್ಯೆ ಮಾಡಲಾಗಿದೆ. ಇನ್ನು ಓರ್ವ ಉಗ್ರನಿಗಾಗಿ ಕೂಂಬಿಂಗ್ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.