ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಗುಜರಾತ್ ಗಲಭೆಗೆ ಮೋದಿ ದೂರುವುದು ಸರಿಯಲ್ಲ: ರಾಜನಾಥ್ ಸಿಂಗ್

2002ರ ಗುಜರಾತ್ ಗಲಭೆ ಒಂದು ದುರದೃಷ್ಟಕರ ಎಂದಿರುವ ಬಿಜೆಪಿ ಅಧ್ಯಕ್ಷ ರಾಜನಾಥ್ ಸಿಂಗ್, ಘಟನೆ ಸಂಬಂಧ ಗುಜರಾತ್..

Lingaraj Badiger
Updated On : 1 Sept 2013, 5:38 am

ನವದೆಹಲಿ: 2002ರ ಗುಜರಾತ್ ಗಲಭೆ ಒಂದು ದುರದೃಷ್ಟಕರ ಎಂದಿರುವ ಬಿಜೆಪಿ ಅಧ್ಯಕ್ಷ ರಾಜನಾಥ್ ಸಿಂಗ್, ಘಟನೆ ಸಂಬಂಧ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಅವರನ್ನು ದೂರುವುದು ಸರಿಯಲ್ಲ ಎಂದು ಭಾನುವಾರ ಹೇಳಿದ್ದಾರೆ.

ಇಂದು ದೆಹಲಿಯಲ್ಲಿ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ರಾಷ್ಟ್ರೀಯ ಕಾರ್ಯಕಾರಣಿ ಸಭೆಯಲ್ಲಿ ಮಾತನಾಡಿದ ಸಿಂಗ್, ಗುಜರಾತ್ ಗಲಭೆ ದುರದೃಷ್ಟಕರ ನಿಜ. ಆದರೆ ಈ ಸಂಬಂಧ ನರೇಂದ್ರ ಮೋದಿ ಮೇಲೆ ಆರೋಪ ಹೊರಿಸುವುದು ಸರಿಯಲ್ಲ ಎಂದರು.

ಇದೇ ವೇಳೆ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ರಾಜನಾಥ್ ಸಿಂಗ್, ಕಾಂಗ್ರೆಸ್‌ನವರು ಬ್ರಿಟಿಷ್‌ರ ಯಾವುದೇ ನೀತಿಯನ್ನು ಅಳವಡಿಸಿಕೊಳ್ಳದಿದ್ದರೂ, ಒಡೆದು ಆಳುವ ನೀತಿಯೊಂದನ್ನು ಮಾತ್ರ ಅಳವಡಿಸಿಕೊಂಡಿದ್ದಾರೆ ಎಂದರು. ಅಲ್ಲದೆ ಕಾಂಗ್ರೆಸ್ ಮತ್ತು ಇತರೆ ಕೆಲವು ರಾಜಕೀಯ ಪಕ್ಷಗಳು ಧಾರ್ಮಿಕತೆ ಆಧಾರದ ಮೇಲೆ ದೇಶವನ್ನು ಇಬ್ಭಾಗ ಮಾಡುತ್ತಿವೆ ಎಂದು ಸಿಂಗ್ ಆರೋಪಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement