ನೆಲ್ಸನ್ ಮಂಡೇಲಾ ಆಸ್ಪತ್ರೆಯಿಂದ ಡಿಸ್ಚಾರ್ಜ್
ದಕ್ಷಿಣ ಆಫ್ರಿಕಾ ಮಾಜಿ ಅಧ್ಯಕ್ಷ ನೆಲ್ಸನ್ ಮಂಡೇಲಾ ಅವರು ಪ್ರಿಟೋರಿಯಾ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ..
ಜೊಹಾನ್ಸ್ಬರ್ಗ್: ದಕ್ಷಿಣ ಆಫ್ರಿಕಾ ಮಾಜಿ ಅಧ್ಯಕ್ಷ ನೆಲ್ಸನ್ ಮಂಡೇಲಾ ಅವರು ಪ್ರಿಟೋರಿಯಾ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ ಎಂದು ದಕ್ಷಿಣಾ ಆಫ್ರಿಕಾದ ಅಧ್ಯಕ್ಷರ ಕಚೇರಿ ಭಾನುವಾರ ತಿಳಿಸಿದೆ.
ಮಂಡೇಲಾ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ಇನ್ನುಮುಂದೆ ಅವರು ಆಸ್ಪತ್ರೆಯಲ್ಲಿ ಪಡೆಯುತ್ತಿದ್ದ ಚಿಕಿತ್ಸೆಯನ್ನು ತಮ್ಮ ಮನೆಯಲ್ಲಿಯೇ ಪಡೆಯಲಿದ್ದಾರೆ ಎಂದು ಅಧ್ಯಕ್ಷ ಜಾಕೋಬ್ ಝುಮಾ ಅವರ ಕಚೇರಿ ಸ್ಪಷ್ಟಪಡಿಸಿದೆ.
ಶ್ವಾಸಕೋಶದಲ್ಲಿನ ಸಮಸ್ಯೆ ಹಿನ್ನೆಲೆಯಲ್ಲಿ 95 ವರ್ಷದ ಕರಿಯರ ನಾಯಕನನ್ನು ಜೂ.8ರಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು.