ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ತೇಜ್ಪಾಲ್ ಲೈಂಗಿಕ ಕಿರುಕುಳ ಪ್ರಕರಣ: ಶೋಮಾಗೆ ಸಮನ್ಸ್

ತೆಹಲ್ಕಾ ಮಾಜಿ ಸಂಪಾದಕ ತರುಣ್ ತೇಜ್ಪಾಲ್ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಹಲ್ಕಾದ ಮಾಜಿ ವ್ಯವಸ್ಥಾಪಕ ..

Srinivasa Murthy VN
Updated On : 4 Dec 2013, 4:36 am

ಪಣಜಿ: ತೆಹಲ್ಕಾ ಮಾಜಿ ಸಂಪಾದಕ ತರುಣ್ ತೇಜ್ಪಾಲ್ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಹಲ್ಕಾದ ಮಾಜಿ ವ್ಯವಸ್ಥಾಪಕ ಸಂಪಾದಕಿ ಶೋಮಾ ಚೌದರಿ ಅವರಿಗೆ ಗೋವಾ ಪೊಲೀಸರು ಬುಧವಾರ ಸಮನ್ಸ್ ಜಾರಿ ಮಾಡಿದ್ದಾರೆ.

ಪ್ರಕರಣ ಸಂಬಂಧ ಶೋಮ ಚೌದರಿ ಅವರನ್ನು ವಿಚಾರಣೆಗೊಳಪಡಿಸಲು ಮುಂದಾಗಿರುವ ಗೋವಾ ಪೊಲೀಸರು, ಶೋಮಾ ಅವರ ಹೇಳಿಕೆಗಳನ್ನು ರೆಕಾರ್ಡ್ ಮಾಡಿಕೊಳ್ಳಲು ಸಿದ್ಧತೆ ನಡೆಸಿದ್ದಾರೆ. ಆದರೆ ಈ ವರೆಗೂ ವಿಚಾರಣೆ ನಡೆಸುವ ದಿನಾಂಕ ಮತ್ತು ಸ್ಥಳವನ್ನು ಪೊಲೀಸರು ನಿಗದಿಪಡಿಸಿಲ್ಲ.

ಸಹೋದ್ಯೋಗಿ ಪತ್ರಕರ್ತೆಯ ಮೇಲೆ ತೆಹಲ್ಕಾದ ಸಂಪಾದಕರಾಗಿದ್ದ ತರುಣ್ ತೇಜಪಾಲ್ ಅವರು ನಡೆಸಿದ್ದ ಲೈಂಗಿಕ ಕಿರುಕುಳ ಪ್ರಕರಣ ಬೆಳಕಿಗೆ ಬಂದ ಮೇಲೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕಿಯಾಗಿದ್ದ ಶೋಮಾ ಚೌದರಿ ಅವರು ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಅಲ್ಲದೆ ಪ್ರಕರಣ ಸಂಬಂಧ ಅವರು ನಡೆದುಕೊಂಡ ರೀತಿಯ ಬಗ್ಗೆ ಸಾಕಷ್ಟು ಟೀಕೆಗಳು ವ್ಯಕ್ತವಾಗಿದ್ದವು. ಈ ಹಿನ್ನಲೆಯಲ್ಲಿ ಲೈಂಗಿಕ ಕಿರುಕುಳಕ್ಕೊಳಗಾದ ಯುವತಿ ಪತ್ರಿಕೆಗೆ ರಾಜಿನಾಮೆ ನೀಡಿದ ಬೆನ್ನಲ್ಲಿಯೇ ಶೋಮಾ ಚೌದರಿ ಕೂಡ ತಮ್ಮ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸಿದ್ದರು.

ಇದೀಗ ಪ್ರಕರಣ ಸಂಬಂಧ ಗೋವಾ ಪೊಲೀಸರು ಶೋಮಾ ಚೌದರಿ ಅವರಿಗೆ ವಿಚಾರಣೆಗೆ ಖುದ್ದು ಹಾಜರಾಗುವಂತೆ ಸಮನ್ಸ್ ನೀಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement