'ಚಾಯ್ ವಾಲಾ' ಕೂಡ ಪ್ರಧಾನಿಯಾಗಬಹುದು: ದಿಗ್ವಿಜಯ್ ಸಿಂಗ್
ಆಶ್ಚರ್ಯಕರ ಬೆಳವಣಿಯೊಂದರಲ್ಲಿ ಕಾಂಗ್ರೆಸ್ ಮುಖಂಡ ದಿಗ್ವಿಜಯ್ ಸಿಂಗ್ ಅವರು, ಟೀ ಮಾರುತ್ತಿದ್ದ ನರೇಂದ್ರ ಮೋದಿ ಅವರು ಕೂಡ ಪ್ರಧಾನಮಂತ್ರಿಯಾಗಬಹುದು ಎಂದು ಹೇಳಿದ್ದಾರೆ.
ನವದೆಹಲಿ: ಆಶ್ಚರ್ಯಕರ ಬೆಳವಣಿಯೊಂದರಲ್ಲಿ ಕಾಂಗ್ರೆಸ್ ಮುಖಂಡ ದಿಗ್ವಿಜಯ್ ಸಿಂಗ್ ಅವರು, ಟೀ ಮಾರುತ್ತಿದ್ದ ನರೇಂದ್ರ ಮೋದಿ ಅವರು ಕೂಡ ಪ್ರಧಾನಮಂತ್ರಿಯಾಗಬಹುದು ಎಂದು ಹೇಳಿದ್ದಾರೆ.
ನವದೆಹಲಿಯಲ್ಲಿ ಮಾತನಾಡಿರುವ ದಿಗ್ವಿಜಯ್ ಸಿಂಗ್ ಅವರು, ಮತಾಂಧ ನಡವಳಿಕೆಯನ್ನು ಬಿಟ್ಟು ಜಾತ್ಯಾತೀತತೆಯನ್ನು ಅನುಸರಿಸುವುದಾದರೆ ಟೀ ಮಾರುವ ವ್ಯಕ್ತಿಯೂ ಕೂಡ ಪ್ರಧಾನ ಮಂತ್ರಿಯಾಗಬಹುದು. ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಅವರು ತಮ್ಮ ಮತಾಂಧ ನಡವಳಿಕೆಯನ್ನು ಬಿಟ್ಟು, ಜಾತ್ಯಾತೀತ ಮನೋಭಾವನೆಯನ್ನು ಅಳವಡಿಸಿಕೊಳ್ಳುವುದಾದರೆ ಪ್ರಧಾನಿ ಅಭ್ಯರ್ಥಿಯಾಗಿ ಅವರಿಗೆ ನಮ್ಮ ಸ್ವಾಗತವಿದೆ.
ಅಂತೆಯೇ ಸಂಘ ಪರಿವಾರ ಮತ್ತು ಬಿಜೆಪಿ ಕೂಡ ನೆಹರೂ ಮತ್ತು ಕಾಂಗ್ರೆಸ್ನ ಜಾತ್ಯಾತೀತ ತತ್ವ ಸಿದ್ಧಾಂತಗಳನ್ನು ಅನುಸರಿಸುವುದಾದರೆ ನಾವು ಹೃದಯಪೂರ್ವಕವಾಗಿ ಸ್ವಾಗತಿಸುತ್ತೇವೆ. ಆದರೆ ನರೇಂದ್ರ ಮೋದಿ ಅವರನ್ನು ಪ್ರಧಾನಿಯಾಗಿ ಭಾರತದ ಪ್ರಜೆಗಳು ಒಪ್ಪಲಾರರು. ಒಂದು ವೇಳೆ ದೇವರ ಕೃಪಾಕಟಾಕ್ಷದಿಂದ ಬಿಜೆಪಿ ಅಧಿಕಾರಕ್ಕೆ ಬಂದರೆ ಸುಷ್ಮಾ ಸ್ವರಾಜ್ ಅವರು ಪ್ರಧಾನಿ ಅಭ್ಯರ್ಥಿಯಾಗಬಹುದು ಎಂದು ದಿಗ್ವಿಜಯ್ ಸಿಂಗ್ ಹೇಳಿದರು.
ಪ್ರತಿ ಬಾರಿ ಮಾಧ್ಯಮಗಳ ಮುಂದೆ ಕಾಣಿಸಿಕೊಂಡಾಗಲೆಲ್ಲಾ ಬಿಜೆಪಿ ಪ್ರಧಾನಿ ನರೇಂದ್ರ ಮೋದಿ ಅವರ ಕಾಲೆಳೆಯುತ್ತಿದ್ದ ಕಾಂಗ್ರೆಸ್ ಮುಖಂಡ ದಿಗ್ವಿಜಯ್ ಸಿಂಗ್ ಅವರು ಈ ಬಾರಿ ಮೋದಿ ಕುರಿತು ನೀಡಿರುವ ಹೇಳಿಕೆ ಅಚ್ಚರಿ ಮೂಡಿಸಿದೆ.