ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ವಕೀಲೆಗೆ ಲೈಂಗಿಕ ಕಿರುಕುಳ: ನ್ಯಾ.ಗಂಗೂಲಿ ವಿರುದ್ಧ ಸಾಕ್ಷಿ?

ವಕೀಲೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ನಿವೃತ್ತ ನ್ಯಾ.ಎ.ಕೆ.ಗಂಗೂಲಿ ಅವರ ವಿರುದ್ಧ ಸಾಕ್ಷ್ಯಾಧಾರಗಳು ಲಭ್ಯವಾಗಿರುವ ಕುರಿತು ಮಾಹಿತಿ ಲಭ್ಯವಾಗಿದೆ.

ಆರೋಪ ಎದುರಿಸುತ್ತಿರುವ ನಿವೃತ್ತ ನ್ಯಾ.ಎ.ಕೆ.ಗಂಗೂಲಿ
Srinivasa Murthy VN
Updated On : 5 Dec 2013, 7:34 am

ನವದೆಹಲಿ: ತರಬೇತಿಗಾಗಿ ಬಂದಿದ್ದ ಯುವ ವಕೀಲೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಸುಪ್ರೀಂ ಕೋರ್ಟ್ ನಿವೃತ್ತ ನ್ಯಾ.ಎ.ಕೆ.ಗಂಗೂಲಿ ಅವರ ವಿರುದ್ಧ ಸಾಕ್ಷ್ಯಾಧಾರಗಳು ಲಭ್ಯವಾಗಿರುವ ಕುರಿತು ಮಾಹಿತಿ ಲಭ್ಯವಾಗಿದೆ.

ಲೈಂಗಿಕ ಕಿರುಕುಳ ಪ್ರಕರಣದ ತನಿಖೆಗಾಗಿ ನೇಮಿಸಲ್ಪಟ್ಟಿದ್ದ ಸುಪ್ರೀಂ ಕೋರ್ಟ್‌ನ ಮೂವರು ನ್ಯಾಯಮೂರ್ತಿಗಳ ತಂಡಕ್ಕೆ ಪ್ರಾಥಮಿಕ ಸಾಕ್ಷ್ಯಾಧಾರಗಳು ಲಭ್ಯವಾಗಿದ್ದು, ಸ್ವತಃ ಈ ತಂಡವೇ ಇದನ್ನು ಸ್ಪಷ್ಟಪಡಿಸಿವೆ. ನವದೆಹಲಿಯಲ್ಲಿ ಈ ಬಗ್ಗೆ ಮಾತನಾಡಿರುವ ನ್ಯಾಯಾಧೀಶರ ತಂಡ, 'ಮೇಲುನೋಟಕ್ಕೆ ಎ.ಕೆ.ಗಂಗೂಲಿ ಅವರ ವಿರುದ್ಧದ ಆರೋಪದಲ್ಲಿ ಸತ್ಯಾಂಶವಿದೆ. ಈ ಬಗ್ಗೆ ಪ್ರಾಥಮಿಕ ಮಾಹಿತಿಗಳು ಲಭ್ಯವಾಗಿದ್ದು, ಪ್ರಕರಣದ ಕುರಿತು ಗಂಗೂಲಿ ಅವರು ನಡೆದುಕೊಳ್ಳುತ್ತಿರುವ ರೀತಿ ಸ್ವಾಗತಾರ್ಹವಲ್ಲ ಎಂದು ಅಭಿಪ್ರಾಯಪಟ್ಟಿದೆ.

ಪ್ರಕರಣದ ಕುರಿತು ತನಿಖೆ ನಡೆಸಲು ಸುಪ್ರೀಂ ಕೋರ್ಟ್ ನೇಮಿಸಿದ್ದ ನ್ಯಾ.ಪಿ.ಸದಾಶಿವಂ ಅವರ ನೇತೃತ್ವದ ಸತ್ಯಶೋಧನಾ ಸಮಿತಿ ಇಂದು ತನ್ನ ಪ್ರಾಥಮಿಕ ವರದಿಯನ್ನು ತಯಾರಿಸಿದ್ದು, ಮುಖ್ಯ ನ್ಯಾಯಮೂರ್ತಿಗಳು ಈ ವರದಿಯ ಪ್ರತಿಯನ್ನು ಕಾನೂನು ಸಮಿತಿಗೆ ಮತ್ತು ಆರೋಪವನ್ನು ನಿರಾಕರಿಸುತ್ತಿರುವ ಎಕೆ ಗಂಗೂಲಿ ಅವರಿಗೆ ರವಾನಿಸಲು ಮುಂದಾಗಿದ್ದಾರೆ.

ಒಟ್ಟಾರೆ ಇಡೀ ದೇಶವನ್ನು ಬೆಚ್ಚಿ ಬೀಳಿಸಿದ್ದ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸತ್ಯ ಶೋಧನಾ ಸಮಿತಿ ಪ್ರಮುಖ ತಿರುವು ನೀಡಿದ್ದು, ನ್ಯಾಯ ದೊರಕಸಿಕೊಡಬೇಕಾದ ನ್ಯಾಯಮೂರ್ತಿಗಳೇ ಇಂತಹ ಕೃತ್ಯದಲ್ಲಿ ಭಾಗಿಯಾಗಿರುವುದು ದೇಶದ ಜನತೆಯ ಆಕ್ರೋಶಕ್ಕೆ ಕಾರಣವಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement