ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ನಾಳೆ ನಾಲ್ಕು ರಾಜ್ಯಗಳ ಫಲಿತಾಂಶದತ್ತ ಎಲ್ಲರ ಚಿತ್ತ

ಲೋಕಸಭೆ ಚುನಾವಣೆಯ ಸೆಮಿ-ಫೈನಲ್ ಎಂದೇ ಪರಿಗಣಿಸಲಾಗಿರುವ ನಾಲ್ಕು ರಾಜ್ಯಗಳ ವಿಧಾಸಭಾ ಚುನಾವಣೆಯ ಫಲಿತಾಂಶ ನಾಳೆ ಪ್ರಕಟವಾಗಲಿದೆ.

Lingaraj Badiger
Updated On : 7 Dec 2013, 4:03 am

ನವದೆಹಲಿ: ಲೋಕಸಭೆ ಚುನಾವಣೆಯ ಸೆಮಿ-ಫೈನಲ್ ಎಂದೇ ಪರಿಗಣಿಸಲಾಗಿರುವ ನಾಲ್ಕು ರಾಜ್ಯಗಳ ವಿಧಾಸಭಾ ಚುನಾವಣೆಯ ಫಲಿತಾಂಶ ನಾಳೆ ಪ್ರಕಟವಾಗಲಿದೆ.

ದೆಹಲಿ, ಮಧ್ಯಪ್ರದೇಶ, ರಾಜಸ್ಥಾನ ಮತ್ತು ಛತ್ತೀಸ್‌ಗಡ ವಿಧಾನಸಭೆ ಚುನಾವಣೆ ಫಲಿತಾಂಶ ನಾಳೆ ಪ್ರಕಟವಾಗಲಿದ್ದು, ಮಿಜೋರಾಂನಲ್ಲಿ ಡಿಸೆಂಬರ್, 9ಕ್ಕೆ ಫಲಿತಾಂಶ ಪ್ರಕಟಗೊಳ್ಳಲಿದೆ.

ಐದು ರಾಜ್ಯಗಳಲ್ಲೂ ಮತದಾರ ಪ್ರಭು ಉತ್ತಮ ಪ್ರತಿಕ್ರಿಯೆ ನೀಡಿದ್ದು, ದೆಹಲಿಯಲ್ಲಿ ಶೇ65, ಮಿಜೋರಾಂನಲ್ಲಿ ಶೇ.81, ರಾಜಸ್ಥಾನದಲ್ಲಿ ಶೇ.74, ಮಧ್ಯಪ್ರದೇಶ ಹಾಗೂ ಛತ್ತೀಸ್‌ಗಡದಲ್ಲಿ ಶೇ.70ರಷ್ಟು ಮತದಾನವಾಗಿದೆ.

ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಅವರು ಬಿಜೆಪಿ ಪ್ರಧಾನಿ ಅಭ್ಯರ್ಥಿಯಾಗಿ ಚುನಾವಣಾ ಪ್ರಚಾರ ಕೈಗೊಂಡಿದ್ದರಿಂದ ಎಲ್ಲರ ಚಿತ್ತ ಈಗ ಐದು ರಾಜ್ಯಗಳ ಚುನಾವಣಾ ಫಲಿತಾಂಶದತ್ತ ನೆಟ್ಟಿದೆ.

ಈಗಾಗಲೇ ಮತದಾನೋತ್ತರ ಸಮೀಕ್ಷೆಯಲ್ಲಿ ಮಧ್ಯಪ್ರದೇಶ, ಛತ್ತೀಸ್‌ಗಡ, ದೆಹಲಿ ಹಾಗೂ ರಾಜಸ್ಥಾನಗಳಲ್ಲಿ ಕಮಲ ಅರಳಿದೆ.ಪಂಚ ರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿ 4-0 ಅಂತರದಲ್ಲಿ ಗೆಲವು ಕಾಣುವ ಸಾಧ್ಯತೆಗಳು ಹೆಚ್ಚಾಗಿವೆ.

ಆಂಗ್ಲ ವಾಹಿನಿಗಳು ನಡೆಸಿದ ಮತದಾನೋತ್ತರ ಸಮೀಕ್ಷೆಯಲ್ಲಿ ಈ ಅಭಿಪ್ರಾಯ ವ್ಯಕ್ತವಾಗಿದೆ. ದೆಹಲಿಯಲ್ಲಿ ತ್ರಿಶಂಕು ಎನಿಸಿದರೂ, ಬಿಜೆಪಿಯೇ ಅತಿದೊಡ್ಡ ಪಕ್ಷವಾಗಲಿದೆ. ಮಧ್ಯ ಪ್ರದೇಶದಲ್ಲಿ ಶಿವರಾಜ್ 'ಕಿಂಗ್' ಆಗಲಿದ್ದರೆ, ರಾಜಸ್ಥಾನದಲ್ಲಿ ವಸುಂಧರೆಯೇ 'ರಾಣಿ'ಯಾಗಲಿದ್ದಾರೆ. ಛತ್ತೀಸ್ಗಡಕ್ಕೆ ಮತ್ತೆ 'ರಮಣ'ನೇ ಆಗಲಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement