ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಆಮ್ ಆದ್ಮಿ ಪಕ್ಷದಿಂದ ಪಾಠ ಕಲಿತಿದ್ದೇವೆ: ರಾಹುಲ್ ಗಾಂಧಿ

ಅಭೂತಪೂರ್ವ ಯಶಸ್ಸು ಸಾಧಿಸಿರುವ ಆಮ್ ಆದ್ಮಿ ಪಕ್ಷದಿಂದ ಸಾಕಷ್ಟು ಪಾಠ ಕಲಿತಿದ್ದೇವೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

Srinivasa Murthy VN
Updated On : 8 Dec 2013, 5:50 am

ನವದೆಹಲಿ: ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಅಭೂತಪೂರ್ವ ಯಶಸ್ಸು ಸಾಧಿಸಿರುವ ಆಮ್ ಆದ್ಮಿ ಪಕ್ಷದಿಂದ ಸಾಕಷ್ಟು ಪಾಠ ಕಲಿತಿದ್ದೇವೆ ಎಂದು ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.

ಪ್ರಸಕ್ತ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಹೀನಾಯ ಸೋಲು ಕಂಡಿರುವ ಹಿನ್ನಲೆಯಲ್ಲಿ ಮಾತನಾಡಿದ ರಾಹುಲ್ ಗಾಂಧಿ, ಆತ್ಮಪೂರ್ವಕವಾಗಿ ಜನತೆಯ ತೀರ್ಪು ಸ್ವೀಕಾರಿಸುತ್ತೇವೆ. ಮುಂದಿನ ಚುನಾವಣೆಯಲ್ಲಿ ಜನತೆಯ ನಿರೀಕ್ಷೆಗೆ ಅನುಗುಣವಾಗಿ ನಡೆಯುವ ಪ್ರಯತ್ನ ಮಾಡುತ್ತೇವೆ. ದೆಹಲಿಯಲ್ಲಿ ಶೀಲಾ ದೀಕ್ಷಿತ್ ಅವರು ಉತ್ತಮ ಆಡಳಿತ ನೀಡಿದ್ದಾರೆ. ಆದರೆ ಆಡಳಿತದಲ್ಲಿ ಸಾರ್ವಜನಿಕರ ಪಾಲ್ಗೊಳ್ಳುವಿಕೆಗೆ ಅವರು ಒತ್ತು ನೀಡಿರಲಿಲ್ಲ. ಆದರೆ ಆಮ್ ಆದ್ಮಿ ಪಕ್ಷ ಸಾರ್ವಜನಿಕರನ್ನು ತಲುಪಿತ್ತು.

ಸಾರ್ವಜನಿಕರಿಗೆ ಆ ಪಕ್ಷ ಸ್ಪಂಧಿಸಿದ್ದು, ನಾವು ಆ ಪಕ್ಷದಿಂದ ಪಾಠ ಕಲಿತಿದ್ದೇವೆ. ಕಾಂಗ್ರೆಸ್ ಪಕ್ಷಕ್ಕೆ ಜನತೆ ನೀಡಿರುವ ಸಂದೇಶವನ್ನು ವಿನಯಪೂರ್ವಕವಾಗಿಯೇ ಸ್ವೀಕರಿಸುತ್ತೇವೆ ಎಂದು ರಾಹುಲ್ ಹೇಳಿದರು.

ನಾಲ್ಕು ರಾಜ್ಯಗಳಲ್ಲಿಯೂ ಬಿಜೆಪಿ ಮೈಲುಗೈ ಸಾಧಿಸಿರುವ ಕುರಿತು ಸುದ್ದಿಗಾರರು ಪ್ರಶ್ನಿಸಿದ ಪ್ರಶ್ನೆಯೊಂದಕ್ಕೆ ಉತ್ತರಿಸಿದ ರಾಹುಲ್ ಗಾಂಧಿ ಅವರು, ಪ್ರಸಕ್ತ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರೆಲ್ಲರೂ ಗೆಲುವಿಗಾಗಿಯೇ ಶ್ರಮಿಸಿದ್ದರು. ಕಾರ್ಯಕರ್ತರಿಗೆ ನಾನು ಮೊದಲು ಧನ್ಯವಾದ ಹೇಳಲಿಚ್ಛಿಸುತ್ತೇನೆ. ಚುನಾವಣೆಯಲ್ಲಿ ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರು ಪ್ರಮುಖ ಪಾತ್ರವಹಿಸಿದ್ದಾರೆ. ದೆಹಲಿಯನ್ನು ಹೊರತು ಪಡಿಸಿದಂತೆ ಉಳಿದ ಕಾಂಗ್ರೆಸ್ ಸೋತಿರುವ ರಾಜ್ಯಗಳ ಫಲಿತಾಂಶವನ್ನು ಗಮನಿಸಿದರೆ ನಿಜಕ್ಕೂ ಆಘಾತವಾಗಿತ್ತು ಎಂದು ರಾಹುಲ್ ಗಾಂಧಿ ಹೇಳಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement