ಛತ್ತೀಸ್‌ಗಡ: ಬಿಜೆಪಿ, ಕಾಂಗ್ರೆಸ್ ನಡುವೆ ತೀವ್ರ ಪೈಪೋಟಿ
ಛತ್ತೀಸ್‌ಗಡ ವಿಧಾನಸಭಾ ಚುನಾವಣಾ ಫಲಿತಾಂಶ ತೀವ್ರ ಕುತೂಹಲ ಕೆರಳಿಸಿದ್ದು, ವಿಜಯ ಲಕ್ಷ್ಮಿ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳ ನಡುವೆ ಸವಾರಿ ಮಾಡುತ್ತಿದ್ದಾಳೆ.
ರಾಯ್‌ಪುರ: ಪ್ರಸಕ್ತ ಪಂಚರಾಜ್ಯಗಳ ಚುನಾವಣೆಯಲ್ಲಿಯೇ ಛತ್ತೀಸ್‌ಗಡ ವಿಧಾನಸಭಾ ಚುನಾವಣಾ ಫಲಿತಾಂಶ ತೀವ್ರ ಕುತೂಹಲ ಕೆರಳಿಸಿದ್ದು, ವಿಜಯ ಲಕ್ಷ್ಮಿ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳ ನಡುವೆ ಸವಾರಿ ಮಾಡುತ್ತಿದ್ದಾಳೆ.
ಗೆಲುವಿಗಾಗಿ ಉಭಯ ಪಕ್ಷಗಳ ನಡುವೆ ತೀವ್ರ ಪೈಪೋಟಿ ಏರ್ಪಟಿದ್ದು, ಆರಂಭದಲ್ಲಿ ಮೆಲುಗೈ ಸಾಧಿಸಿದ್ದ ಆಡಳಿತಾರೂಢ ಬಿಜೆಪಿ ಪಕ್ಷ ಬಳಿಕ ಎರಡನೇ ಸ್ಥಾನಕ್ಕೆ ತಳ್ಳಲ್ಪಟ್ಟಿತ್ತು. ಇದೀಗ ಮತ್ತೆ ಮುನ್ನಡೆ ಕಾಯ್ದುಕೊಂಡಿರುವ ಬಿಜೆಪಿ ಕಾಂಗ್ರೆಸ್‌ಗಿಂತಲೂ 4 ಅಧಿಕ ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ.
ಒಟ್ಟು 90 ಸ್ಥಾನಗಳನ್ನು ಹೊಂದಿರುವ ಛತ್ತೀಸ್‌ಗಡ ವಿಧಾನಸಭೆಯ ಆಡಳಿತ ಚುಕ್ಕಾಣಿ ಹಿಡಿಯಲು 46 ಸ್ಥಾನಗಳ ಅಗತ್ಯವಿದೆ. ಈಗಾಗಲೇ ಬಿಜೆಪಿ ಒಟ್ಟು 25 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದು, ಪ್ರತಿಪಕ್ಷ ಕಾಂಗ್ರೆಸ್ ಕೂಡ 27 ಸ್ಥಾನಗಳಲ್ಲಿ ಗೆಲುವು ಸಾಧಿಸಿ ತೀವ್ರ ಪೈಪೋಟಿ ನೀಡುತ್ತಿದೆ. ಕಳೆದ ಬಾರಿಯ ಚುನಾವಣೆಯಲ್ಲಿ 50 ಸ್ಥಾನಗಳನ್ನು ಗಳಿಸಿ ಅಧಿಕಾರದ ಗದ್ದುಗೆಗೇರಿದ್ದ ಬಿಜೆಪಿ ಈ ಭಾರಿ ಕಾಂಗ್ರೆಸ್ ಪಕ್ಷದಿಂದ ತೀವ್ರ ಪೈಪೋಟಿ ಎದುರಿಸುತ್ತಿದೆ.
ಛತ್ತೀಸ್‌ಗಡದಲ್ಲಿ ಈ ಬಾರಿ ಕಾಂಗ್ರೆಸ್ ಪರ ಅನುಕಂಪದ ಅಲೆ ಸೃಷ್ಟಿಯಾಗಿದ್ದು, ಆಡಳಿತಾ ರೂಢ ಬಿಜೆಪಿ ಕಾಂಗ್ರೆಸ್‌ನಿಂದ ತೀವ್ರ ಪೈಪೋಟಿ ಎದುರಿಸುತ್ತಿದೆ. ಅಂತೆಯೇ ಈ ಬಾರಿಯ ಚುನಾವಣೆಯನ್ನೂ ಗೆಲ್ಲುವ ಮೂಲಕ ರಾಜ್ಯದಲ್ಲಿ ಹ್ಯಾಟ್ರಿಕ್ ಸಾಧಿಸ ಹೊರಟಿರುವ ಮುಖ್ಯಮಂತ್ರಿ ರಮಣ್ ಸಿಂಗ್ ಅವರಿಗೆ ಕಾಂಗ್ರೆಸ್ ತೀವ್ರ ಪೈಪೋಟಿ ನೀಡುತ್ತಿದೆ.