ಮೋದಿ ಜನಪ್ರಿಯತೆಯಿಂದಾಗಿ ಹೆಚ್ಚು ಸ್ಥಾನ: ರಾಜನಾಥ್ ಸಿಂಗ್
ನರೇಂದ್ರ ಮೋದಿ ಅವರ ಜನಪ್ರಿಯತೆಯಿಂದಾಗಿ ನಾವು ಚುನಾವಣೆಯಲ್ಲಿ ಹೆಚ್ಚು ಸ್ಥಾನಗಳನ್ನು ಗಳಿಸಿದ್ದೇವೆ ಎಂದು ಪಕ್ಷದ ರಾಷ್ಟ್ರಾಧ್ಯಕ್ಷ ರಾಜ್ನಾಥ್ ಸಿಂಗ್ ಹೇಳಿದರು.
ನವದೆಹಲಿ: ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರ ಜನಪ್ರಿಯತೆಯಿಂದಾಗಿ ನಾವು ಚುನಾವಣೆಯಲ್ಲಿ ಹೆಚ್ಚು ಸ್ಥಾನಗಳನ್ನು ಗಳಿಸಿದ್ದೇವೆ ಎಂದು ಪಕ್ಷದ ರಾಷ್ಟ್ರಾಧ್ಯಕ್ಷ ರಾಜ್ನಾಥ್ ಸಿಂಗ್ ಹೇಳಿದರು.
ನಾಲ್ಕು ರಾಜ್ಯಗಳಲ್ಲಿ ಇಂದು ನಡೆದ ಚುನಾವಣಾ ಫಲಿತಾಂಶದ ಕುರಿತು ಮಾತನಾಡಲು ನವದೆಹಲಿಯಲ್ಲಿ ಕರೆಯಲಾಗಿದ್ದ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ರಾಜ್ನಾಥ್ ಸಿಂಗ್ ಅವರು, ಪ್ರಸಕ್ತ ಚುನಾವಣೆಯಲ್ಲಿ ನರೇಂದ್ರ ಮೋದಿ ಅವರು ಬಹಳ ಪ್ರಮುಖ ಪಾತ್ರವಹಿಸಿದ್ದು, ಗುಜರಾತ್ನಲ್ಲಿ ಅವರು ಮಾಡಿದ್ದ ಜನಪರ ಆಡಳಿತ ಮತ್ತು ಅವರ ಜನಪ್ರಿಯತೆಯಿಂದಾಗಿ ನಾವು ಹೆಚ್ಚು ಸ್ಥಾನಗಳನ್ನು ಗಳಿಸುವಂತಾಯಿತು.
ದೆಹಲಿಯಲ್ಲಿ ಆಡಳಿತ ವಿರೋಧಿ ಅಲೆ ಇತ್ತಾದರೂ ಅದರಿಂದ ನಮಗೆ ಹೆಚ್ಚಿನ ಲಾಭವಾಗಿಲ್ಲ. ಆಮ್ ಆದ್ಮಿ ಪಕ್ಷ ಆಡಳಿತ ವಿರೋಧಿ ಅಲೆಯಿಂದ ಹೆಚ್ಚಿನ ಲಾಭಗಳಿಸಿತು. ಬಿಜೆಪಿಯ ಗೆಲುವಿಗಾಗಿ ಶ್ರಮಿಸಿದ ಕಾರ್ಯಕರ್ತರಿಗೆ ಮತ್ತು ಇಂದು ಗೆಲುವು ಸಾಧಿಸಿದ ಬಿಜೆಪಿ ಅಭ್ಯರ್ಥಿಗಳಿಗೆ ನಾನು ಅಭನಂದನೆ ಸಲ್ಲಿಸುತ್ತೇನೆ. ನಾಲ್ಕೂ ರಾಜ್ಯಗಳಲ್ಲಿಯೂ ಬಿಜೆಪಿ ಅಧಿಕಾರ ಹಿಡಿಯುವ ವಿಶ್ವಾಸವಿದೆ ಎಂದು ರಾಜ್ನಾಥ್ ಸಿಂಗ್ ಹೇಳಿದರು.