ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಸಿಎಂ ಶೀಲಾ ದೀಕ್ಷಿತ್ ವಿರುದ್ಧ ಕೇಜ್ರಿವಾಲ್ಗೆ ಜಯ

ಆಮ್ ಆದ್ಮಿ ಪಕ್ಷದ ಸಂಸ್ಥಾಪಕ ಅರವಿಂದ್ ಕೇಜ್ರಿವಾಲ್ ಅವರು ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಮುಖ್ಯಮಂತ್ರಿ ಶೀಲಾ ದೀಕ್ಷಿತ್...

Vishwanath S
Updated On : 8 Dec 2013, 4:20 am

ನವದೆಹಲಿ: ಆಮ್ ಆದ್ಮಿ ಪಕ್ಷದ ಸಂಸ್ಥಾಪಕ ಅರವಿಂದ್ ಕೇಜ್ರಿವಾಲ್ ಅವರು ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಮುಖ್ಯಮಂತ್ರಿ ಶೀಲಾ ದೀಕ್ಷಿತ್ ವಿರುದ್ಧ ಬಾರಿ ಅಂತರದ ಮತಗಳಿಂದ ಜಯ ಗಳಿಸಿದ್ದಾರೆ.

ಶೀಲಾ ದೀಕ್ಷಿತ್ ವಿರುದ್ಧ ಸುಮಾರು 22 ಸಾವಿರ ಮತಗಳ ಅಂತರದಿಂದ ಅರವಿಂದ್ ಕೇಜ್ರಿವಾಲ್ ಜಯಭೇರಿ ಬಾರಿಸಿದ್ದಾರೆ. ವಿಜಯದ ನಗೆ ಬೀರಿದ ನಂತರ ಮಾತನಾಡಿದ ಕೇಜ್ರಿವಾಲ್, ಇದು ನನ್ನೊಬ್ಬನ ಗೆಲುವಲ್ಲ. ಇದು ಪ್ರಜಾಪ್ರಭುತ್ವದ ಜನಾದೇಶದ ಗೆಲುವು. ಪಕ್ಷದ ಮೇಲೆ ನಂಬಿಕೆಯಿಟ್ಟು ನಮಗೆ ಮತ ನೀಡಿದ ದೆಹಲಿ ವಿಧಾನಸಭೆ ಕ್ಷೇತ್ರದ ಜನತೆಯ ಜಯ ಎಂದು ತಿಳಿಸಿದ್ದಾರೆ.

ಇಂದು ಬೆಳಗ್ಗೆ ಮತ ಎಣಿಕೆ ಪ್ರಕ್ರಿಯೆ ಪ್ರಾರಂಭದಲ್ಲಿ ಶೀಲಾ ದೀಕ್ಷಿತ್ ಅವರು ಮುನ್ನಡೆ ಸಾಧಿಸಿದ್ದರು. ನಂತರದ ಎಣಿಕೆಯಲ್ಲಿ ಶೀಲಾ ದೀಕ್ಷಿತ್ ಅವರನ್ನು ಹಿಂದಿಕ್ಕಿದ ಕೇಜ್ರಿವಾಲ್ ಜಯದ ನಗೆ ಬೀರಿದರು. ಕೇಜ್ರಿವಾಲ್ ಗೆಲುವನ್ನು ಪ್ರಕಟಗೊಳ್ಳುತ್ತಿದಂತೆ ಅಭಿಮಾನಿಗಳ ಹರ್ಷೊದ್ಗಾರ ಮುಗಿಳು ಮುಟ್ಟಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement