ಸಿಎಂ ಸ್ಥಾನಕ್ಕೆ ಶೀಲಾ ದೀಕ್ಷಿತ್ ರಾಜಿನಾಮೆ
ದೆಹಲಿಯಲ್ಲಿ 15 ವರ್ಷಗಳ ಕಾಂಗ್ರೆಸ್ ಅಧಿಪತ್ಯಕ್ಕೆ ಬ್ರೇಕ್ ಬಿದ್ದಿದ್ದು, ದೆಹಲಿಯಲ್ಲಿ ಕಾಂಗ್ರೆಸ್ ಹಿನ್ನಡೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಶೀಲಾ ದೀಕ್ಷಿತ್...
ನವದೆಹಲಿ: ದೆಹಲಿಯಲ್ಲಿ 15 ವರ್ಷಗಳ ಕಾಂಗ್ರೆಸ್ ಅಧಿಪತ್ಯಕ್ಕೆ ಬ್ರೇಕ್ ಬಿದ್ದಿದ್ದು, ದೆಹಲಿಯಲ್ಲಿ ಕಾಂಗ್ರೆಸ್ ಹಿನ್ನಡೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಶೀಲಾ ದೀಕ್ಷಿತ್ ಅವರು ಭಾನುವಾರ ಸಿಎಂ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ.
ದೆಹಲಿಯಲ್ಲಿ ಕಾಂಗ್ರೆಸ್ನ ಹೀನಾಯ ಸೋಲಿನಿಂದಾಗಿ ಕಂಗೆಟ್ಟಿರುವ ಶೀಲಾ ದೀಕ್ಷಿತ್ ಅವರು ಇಂದು ಉಪ ರಾಜ್ಯಪಾಲರಿಗೆ ತಮ್ಮ ರಾಜಿನಾಮೆ ಪತ್ರವನ್ನು ರವಾನಿಸಿದರು.
ರಾಜಿನಾಮೆ ಪತ್ರವನ್ನು ರವಾನಿಸಿದ ನಂತರ ಮಾತನಾಡಿದ ಅವರು, ದೆಹಲಿ ಮತದಾರರ ತೀರ್ಪನ್ನು ನಾನು ಸ್ವಾಗತಿಸುತ್ತೇನೆ. 15 ವರ್ಷಗಳ ಕಾಲ ಅಧಿಕಾರ ನಡೆಸಲು ರಾಜ್ಯದ ಜನತೆ ನನಗೆ ಅಧಿಕಾರ ನೀಡಿದ್ದರು. ನನ್ನ ಅಧಿಕಾರವಧಿಯಲ್ಲಿ ಉತ್ತಮ ಸರ್ಕಾರ ನಡೆಸಿರುವ ಆತ್ಮ ತೃಪ್ತಿ ಇದೆ ಎಂದರು.