ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಮಿಜೋರಾಂ ಮತ್ತೆ 'ಕೈ' ವಶ

ಕಳೆದ ನವೆಂಬರ್ 25ರಂದು ಈಶಾನ್ಯ ರಾಜ್ಯ ಮಿಜೋರಾಂ ವಿಧಾನಸಭೆಗೆ ನಡೆದ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು,

Lingaraj Badiger
Updated On : 9 Dec 2013, 5:21 am

ಐಜ್ವಾಲ್: ಕಳೆದ ನವೆಂಬರ್ 25ರಂದು ಈಶಾನ್ಯ ರಾಜ್ಯ ಮಿಜೋರಾಂ ವಿಧಾನಸಭೆಗೆ ನಡೆದ ಚುನಾವಣೆಯ ಫಲಿತಾಂಶ ಸೋಮವಾರ ಪ್ರಕಟವಾಗಿದ್ದು, ಮತ್ತೆ ಆಡಳಿರೂಢ ಕಾಂಗ್ರೆಸ್ ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮುವ ಮೂಲಕ ಅಧಿಕಾರವನ್ನು 'ಕೈ' ವಶ ಮಾಡಿಕೊಂಡಿದೆ.

ಮಿಜೋರಾಂನ ಒಟ್ಟು 8 ಜಿಲ್ಲೆಗಳ 40 ವಿಧಾಸಭಾ ಕ್ಷೇತ್ರಗಳ ಪೈಕಿ ಕಾಂಗ್ರೆಸ್ 27 ಸ್ಥಾನಗಳಲ್ಲಿ ಗೆಲುವು ಸಾಧಿಸುವ ಮೂಲಕ ಮೂರನೇ ಬಾರಿ ಅಧಿಕಾರದ ಗದ್ದುಗೆ ಏರಿದೆ.
ಮಿಜೋರಾಂ ಮುಖ್ಯಮಂತ್ರಿ ಲಾಲ್‌ಥನ್ ಹೌಲ ಅವರು ಸಹ ಹ್ಯಾಟ್ರಿಕ್ ಗೆಲುವು ಸಾಧಿಸಿದ್ದು, ಮೂರನೇ ಅವಧಿಗೆ ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದಾರೆ.

ಈವರೆಗೆ ಕಾಂಗ್ರೆಸ್ 27 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದು, 4 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ.

ಉಳಿದಂತೆ ಮಿಜೋರಾಂ ನ್ಯಾಷನಲ್ ಫ್ರಂಟ್(ಎಂಎನ್‌ಫ್) 4 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದು, 3 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಇನ್ನು ಬಿಜೆಪಿ 1 ಸ್ಥಾನದಲ್ಲಿ ಗೆಲವು ಸಾಧಿಸಿದರೆ, ಜೋರಾಂ ರಾಷ್ಚ್ರೀಯ ಪಕ್ಷ(ಝಎನ್‌ಪಿ) 1 ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement