ಒಡೆಯರ್ ವಿಧಿವಶ: ನಾಳೆ ಬೆಂಗಳೂರಿನ ಕೆ.ಆರ್ ಮಾರ್ಕೇಟ್ ಬಂದ್
ಮಹಾರಾಜ ಶ್ರೀಕಂಠದತ್ತ ಒಡೆಯರ್ ನಿಧನದ ಹಿನ್ನಲೆಯಲ್ಲಿ ನಾಳೆ ಬೆಂಗಳೂರಿನ ಕೆ.ಆರ್.ಮಾರ್ಕೇಟ್ ಬಂದ್‌ಗೆ ಕರೆ ನೀಡಲಾಗಿದೆ.
ಬೆಂಗಳೂರು: ಮಹಾರಾಜ ಶ್ರೀಕಂಠದತ್ತ ಒಡೆಯರ್ ನಿಧನದ ಹಿನ್ನಲೆಯಲ್ಲಿ ನಾಳೆ ಬೆಂಗಳೂರಿನ ಕೆ.ಆರ್.ಮಾರ್ಕೇಟ್ ಬಂದ್‌ಗೆ ಕರೆ ನೀಡಲಾಗಿದೆ.
ಬೆಳಿಗೆ 6ರಿಂದ 24 ಘಂಟೆಗಳ ಕಾಲ ಮಾರ್ಕೇಟ್ ಬಂದ್ ಆಗಲಿದೆ. ಒಡೆಯರ್ ನಿಧನಕ್ಕೆ ಸಂತಾಪ ಸೂಚಕವಾಗಿ ಬಂದ್‌ಗೆ ಕರೆ ನೀಡಲಾಗಿದೆ.
ವರ್ತಕರ ಸಂಘದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಂಘದ ಅಧ್ಯಕ್ಷ ದಸ್ತಗಿರಿ ಖಾನ್ ಹೇಳಿದ್ದಾರೆ.
ಮೈಸೂರಿನಲ್ಲಿ ಸರ್ಕಾರಿ ಕಚೇರಿ, ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ
ಒಡೆಯರ್ ನಿಧನದ ಹಿನ್ನಲೆಯಲ್ಲಿ ಮೈಸೂರು ಚಾಮರಾಜನಗರ ಜಿಲ್ಲೆಗಳ ಸರ್ಕಾರಿ ಕಚೇರಿಗಳಿಗೆ ಹಾಗೂ ಶಾಲಾ ಕಾಲೇಜುಗಳಿಗೆ ನಾಳೆ ಮತ್ತು ನಾಡಿದ್ದು ರಜೆ ಘೋಷಿಸಿಲಾಗಿದೆ.
ನಾಳೆ ನಿಗದಿಯಾಗಿದ್ದ ಮೈಸೂರು ವಿಶ್ವವಿದ್ಯಾಲಯದ ಪದವಿ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ಮೈಸೂರು ವಿವಿಯ ಪರೀಕ್ಷಾಂಗ ಕುಲಸಚಿವರು ಹೇಳಿದ್ದಾರೆ.