ಜನರ ವಿಶ್ವಾಸ ಕಳೆದುಕೊಂಡ ಕಾಂಗ್ರೆಸ್: ಮಮತಾ ಬ್ಯಾನರ್ಜಿ
ನವದೆಹಲಿ: ಕಾಂಗ್ರೆಸ್ ಜನರ ವಿಶ್ವಾಸವನ್ನು ಕಳೆದುಕೊಂಡಿದೆ ಎಂದು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರು ಮಂಗಳವಾರ ಹೇಳಿದ್ದಾರೆ.
ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಾತನಾಡಿ, ಕಾಂಗ್ರೆಸ್ ಮೇಲೆ ಯಾವುದೇ ನಂಬಿಕೆ ಇಲ್ಲ ಎಂದು ಜನರು ತೋರಿಸಿಕೊಟ್ಟಿದ್ದಾರೆ ಎಂದು ತಿಳಿಸಿದ್ದಾರೆ.
ನಾಲ್ಕು ರಾಜ್ಯಗಳಲ್ಲಿ ಸೋತು ಮುಖಭಂಗ ಅನುಭವಿಸಿದ ಕಾಂಗ್ರೆಸ್ ವಿರುದ್ಧ ಕಿಡಿಕಾರಿರುವ ಮಮತಾ, ಜನರು ಇಟ್ಟಿದ ನಂಬಿಕೆಗೆ ಕಾಂಗ್ರೆಸ್ ಅನರ್ಹ. ಈಗಾಗಲೇ ಜನರು ನಾಲ್ಕು ರಾಜ್ಯಗಳಲ್ಲಿ ಕಾಂಗ್ರೆಸ್ನ್ನು ತಿರಸ್ಕರಿಸಿದ್ದಾರೆ. ಕಾಂಗ್ರೆಸ್ ಜನರ ವಿಶ್ವಾಸವನ್ನು ಕಳೆದುಕೊಂಡಿದೆ ಎಂದು ಮಮತಾ ಹೇಳಿದ್ದಾರೆ.
ಕಾಂಗ್ರೆಸ್ ಮತ್ತು ಬಿಜೆಪಿಯೊಂದಿಗೆ ತೃಣಮೂಲ ಪಕ್ಷ ಮೈತ್ರಿಯಾಗವ ಪ್ರಶ್ನೆಯೇ ಇಲ್ಲ. ಏಕೆಂದರೆ ತೃಣಮೂಲ ಪಕ್ಷ ಸ್ವತಂತ್ರವಾಗಿ ಆಡಳಿತ ನಡೆಸಲಿದೆ ಎಂದು ಮಮತಾ ಸ್ಪಷ್ಟಪಡಿಸಿದ್ದಾರೆ.