ನೂತನ ಚುನಾವಣೆಗೆ ಸಿದ್ಧ ಮಾಡಿಕೊಳ್ಳಿ: ಗಡ್ಕರಿ
ನವದೆಹಲಿ: ದೆಹಲಿ ಚುನಾವಣೆಯಲ್ಲಿ ಆಯ್ಕೆಗೊಂಡ ಭಾರತೀಯ ಜನತಾ ಪಕ್ಷದ ಶಾಸಕರು ನೂತನ ಚುನಾವಣೆಗೆ ಅಣಿಮಾಡಿಕೊಳ್ಳಿ ಎಂದು ಬಿಜೆಪಿ ನಾಯಕ ನಿತಿನ್ ಗಡ್ಕರಿ ಹೇಳಿದ್ದಾರೆ.
ಮಂಗಳವಾರ ಆಮ್ ಆದ್ಮಿ ಪಕ್ಷ(ಎಎಪಿ) ಬಿಜೆಪಿಗೆ ಬೆಂಬಲ ನೀಡುವುದಿಲ್ಲ ಎಂದು ಹೇಳಿದ ಬೆನ್ನಲ್ಲೇ, ಇತತ್ತ ಬಿಜೆಪಿ ನಾಯಕ ನಿತಿನ್ ಗಡ್ಕರಿ, ದೆಹಲಿಯಲ್ಲಿ ಆಯ್ಕೆಯಾದ ಶಾಸಕರಿಗೆ ಚುನಾವಣೆಗೆ ಅಣಿಮಾಡಿಕೊಳ್ಳಿ ಎಂದು ತಿಳಿಸಿದ್ದಾರೆ.
ನಿಮ್ಮನ್ನು ಶಾಸಕರೆಂದು ನೀವೇ ಪರಿಗಣಿಸಬೇಡಿ, ಅಭ್ಯರ್ಥಿಗಳಾಗಿ ಚಿಂತಿಸಿ. ಮತ್ತೇ ಚುನಾವಣೆಗೆ ಸಿದ್ಧತೆ ನಡೆಸಿ, ಜನರು ನಮ್ಮ ಜೊತೆಗಿದ್ದಾರೆ ಎಂದು ಗಡ್ಕರಿ ಹೇಳಿದ್ದಾರೆ.