ಅಣ್ಣಾಜಿ ನಾವು ನಿಮ್ಮೊಂದಿಗೆ ಇದ್ದೇವೆ: ಕೇಜ್ರಿವಾಲ್
ನವದೆಹಲಿ: ಜನಲೋಕಪಾಲ್ ಮಸೂದೆ ಜಾರಿಗೆ ಒತ್ತಾಯಿಸಿ ಮತ್ತೆ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿರುವ ಹಿರಿಯ ಗಾಂಧಿವಾದಿ ಅಣ್ಣಾ ಹಜಾರೆ ಅವರಿಗೆ ಆಮ್ ಆದ್ಮಿ ಪಕ್ಷ(ಎಎಪಿ)ದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರು ಬುಧವಾರ ಬೆಂಬಲ ಸೂಚಿಸಿದ್ದಾರೆ.
ಇಂದು ಜಂತರ್ ಮಂತರ್‌ನಲ್ಲಿ ಪಕ್ಷದ ವಿಜಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದೆ ಕೇಜ್ರಿವಾಲ್, ಅಣ್ಣಾಜಿ ನಾವು ನಿಮ್ಮೊಂದಿಗೆ ಇದ್ದೇವೆ ಎಂದು ಹೇಳುವ ಮೂಲಕ ಅಣ್ಣಾ ಹಜಾರೆ ಅವರಿಗೆ ಬೆಂಬಲ ಸೂಚಿಸಿದ್ದಾರೆ.
ಇದೇ ವೇಳೆ ನಾಳೆ ರಾಳೇಗಣ್‌ಸಿದ್ಧಿಗೆ ತೆರಳಿ ಅಣ್ಣಾ ಹಜಾರೆ ಅವರನ್ನು ಭೇಟಿ ಮಾಡುವುದಾಗಿ ಕೇಜ್ರಿವಾಲ್ ತಿಳಿಸಿದ್ದಾರೆ.
ತತ್‌ಕ್ಷಣವೇ ಜನಲೋಕಪಾಲ ಮಸೂದೆಯನ್ನು ಸಂಸತ್‌ನಲ್ಲಿ ಅಂಗೀಕರಿಸಬೇಕು ಎಂದು ಆಗ್ರಹಿಸಿ ನಿನ್ನೆಯಿಂದ ಅಣ್ಣಾ ಹಜಾರೆ ಅವರು ತಮ್ಮ ಹುಟ್ಟೂರಾದ ಮಹಾರಾಷ್ಟ್ರದ ರಾಳೇಗಣ್‌ಸಿದ್ಧಿಯಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ.