ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ನಿಗದಿಯಂತೆ ಮೇನಲ್ಲೇ ಲೋಕಸಭೆ ಚುನಾವಣೆ: ಕಮಲ್‌ನಾಥ್

ಅವಧಿಗೆ ಮುನ್ನ ಲೋಕಸಭಾ ಚುನಾವಣೆ ನಡೆಯುವ ಸಾಧ್ಯತೆಗಳನ್ನು ತಳ್ಳಿಹಾಕಿರುವ ಕೇಂದ್ರ ಸರ್ಕಾರ,

Lingaraj Badiger
Updated On : 11 Dec 2013, 4:47 am

ನವದೆಹಲಿ: ಅವಧಿಗೆ ಮುನ್ನ ಲೋಕಸಭಾ ಚುನಾವಣೆ ನಡೆಯುವ ಸಾಧ್ಯತೆಗಳನ್ನು ತಳ್ಳಿಹಾಕಿರುವ ಕೇಂದ್ರ ಸರ್ಕಾರ, ನಿಗದಿಯಂತೆ ಮೇ ತಿಂಗಳಲ್ಲೇ ಸಾರ್ವತ್ರಿಕ ಚುನಾವಣೆ ನಡೆಯಲಿದೆ ಎಂದು ಬುಧವಾರ ಹೇಳಿದೆ.

ನಿಗದಿಯಂತೆ ಲೋಕಸಭಾ ಚುನಾವಣೆ ಮೇನಲ್ಲಿ ನಡೆಯಲಿದೆ ಎಂದು ಕೇಂದ್ರ ಸಚಿವ ಕಮಲ್‌ನಾಥ್ ಅವರು ತಿಳಿಸಿದ್ದಾರೆ.

ಯುಪಿಎ ಸರ್ಕಾರ ಸಂಪುರ್ಣ ಬಹುಮತ ಹೊಂದಿದ್ದು, ಒಂದು ವೇಳೆ ಅವಿಶ್ವಾಸ ನಿರ್ಣಯ ಮಂಡಿಸಿದರೆ ಸರ್ಕಾರ ಬಹುಮತ ಸಾಬೀತುಪಡಿಸಲಿದೆ ಎಂದು ಕಮಲ್‌ನಾಥ್ ಹೇಳಿದ್ದಾರೆ.

ಪ್ರತ್ಯೇಕ ತೆಲಂಗಾಣ ರಾಜ್ಯ ರಚನೆ ವಿರೋಧಿಸಿ ಆಂಧ್ರದ 6 ಮಂದಿ ಕಾಂಗ್ರೆಸ್ ಸಂಸದರು ಸೋಮವಾರ ಪ್ರಧಾನಿ ಮನಮೋಹನ್ ಸಿಂಗ್ ವಿರುದ್ಧವೇ ಅವಿಶ್ವಾಸ ನಿರ್ಣಯ ನೋಟಿಸ್ ಕಳುಹಿಸಿದ್ದಾರೆ. ಸ್ಪೀಕರ್ ಮೀರಾ ಕುಮಾರ್ ಅವರಿಗೆ ಪತ್ರ ಬರೆದಿರುವ ಸಂಸದರು ಅವಿಶ್ವಾಸ ನಿರ್ಣಯ ಮಂಡನೆಗೆ ಅನುಮತಿ ನೀಡುವಂತೆ ಮನವಿ ಮಾಡಿದ್ದಾರೆ. ಲೋಕಸಭೆಯ ನಿಯಮ 198ರಂತೆ ಪ್ರಧಾನಿ ಸಿಂಗ್ ಮತ್ತು ಕೇಂದ್ರ ಸಚಿವರ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ಅನುವು ಮಾಡಿಕೊಡಿ ಎಂದಿದ್ದಾರೆ.

ಇದಕ್ಕೆ ಟಿಡಿಪಿ, ವೈಎಸ್ಸಾರ್ ಕಾಂಗ್ರೆಸ್ ಬೆಂಬಲ ವ್ಯಕ್ತಪಡಿಸಿವೆ. ಟಿಡಿಪಿಯ 4 ಸಂಸದರು, ವೈಎಸ್ಸಾರ್ ಕಾಂಗ್ರೆಸ್‌ನ 3 ಸಂಸದರೂ ಸ್ಪೀಕರ್‌ಗೆ ಪ್ರತ್ಯೇಕ ಪತ್ರ ಬರೆದು ಅವಿಶ್ವಾಸ ನಿರ್ಣಯಕ್ಕೆ ಅನುಮತಿ ನೀಡುವಂತೆ ಕೋರಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement