ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಶನಿವಾರದಿಂದ ಅಣ್ಣಾ ನಿರಶನಕ್ಕೆ ಕಿರಣ್ ಬೇಡಿ ಸಾಥ್

ಜನಲೋಕಪಾಲ್ ಜಾರಿಗಾಗಿ ಹಿರಿಯ ಗಾಂಧಿವಾದಿ ಅಣ್ಣಾ ಹಜಾರೆ ಅವರು ಆರಂಭಿಸಿರುವ ಅನಿರ್ದಿಷ್ಟಾವಧಿ ಉಪವಾಸ ..

Lingaraj Badiger
Updated On : 11 Dec 2013, 5:05 am

ರಾಳೇಗಣ್‌ಸಿದ್ಧಿ: ಜನಲೋಕಪಾಲ್ ಜಾರಿಗಾಗಿ ಹಿರಿಯ ಗಾಂಧಿವಾದಿ ಅಣ್ಣಾ ಹಜಾರೆ ಅವರು ಆರಂಭಿಸಿರುವ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಬುಧವಾರ ಎರಡನೇ ದಿನಕ್ಕೆ ಕಾಲಿಟ್ಟಿದೆ. ಈ ಬಾರಿ ತಾವು ಯಾವುದೇ ಕಾರಣಕ್ಕೂ ಸರ್ಕಾರದ ಒತ್ತಡಕ್ಕೆ ಮಣಿಯುವುದಿಲ್ಲ ಮತ್ತು ಇದು ಮಾಡು ಇಲ್ಲವೇ ಮಡಿ ಸಂದರ್ಭ ಎಂದು ಎಚ್ಚರಿಕೆ ನೀಡಿದ್ದಾರೆ.

ಈ ಮಧ್ಯೆ ನಿವೃತ್ತ ಐಪಿಎಸ್ ಅಧಿಕಾರಿ ಕಿರಣ್ ಬೇಡಿ ಅವರು ಇಂದು ರಾಳೇಗಣ್‌ಸಿದ್ಧಿಗೆ ಆಗಮಿಸಿ ಅಣ್ಣಾ ಹಜಾರೆ ಅವರನ್ನು ಭೇಟಿ ಮಾಡಿದ್ದಾರೆ. ಅಲ್ಲದೆ ಭೇಟಿಯ ಬಳಿಕ ಅಣ್ಣಾ ಅವರೊಂದಿಗೆ ತಾವು ಶನಿವಾರದಿಂದ ಉಪವಾಸ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

ತತ್‌ಕ್ಷಣವೇ ಜನಲೋಕಪಾಲ ಮಸೂದೆಯನ್ನು ಸಂಸತ್‌ನಲ್ಲಿ ಅಂಗೀಕರಿಸಬೇಕು ಎಂದು ಆಗ್ರಹಿಸಿ ನಿನ್ನೆಯಿಂದ ಅಣ್ಣಾ ಹಜಾರೆ ಅವರು ತಮ್ಮ ಹುಟ್ಟೂರಾದ ಮಹಾರಾಷ್ಟ್ರದ ರಾಳೇಗಣ್‌ಸಿದ್ಧಿಯಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement