ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಕೇಂದ್ರದ ಸಮ್ಮತಿಯಿಲ್ಲದೆ ಭಯೋತ್ಪಾದನೆ ಪ್ರಕರಣ ಹಿಂಪಡೆಯುವಂತಿಲ್ಲ

Mainashree
Updated On : 12 Dec 2013, 3:07 am

ಲಖನೌ: ಕೇಂದ್ರ ಸರ್ಕಾರದ ಅನುಮತಿಯಿಲ್ಲದೇ ಭಯೋತ್ಪಾದನಾ ಪ್ರಕರಣಗಳನ್ನು ಉತ್ತರಪ್ರದೇಶದ ಸರ್ಕಾರ ಹಿಂಪಡೆಯುವಂತಿಲ್ಲ ಎಂದು ಅಲಹಾಬಾದ್ ಹೈಕೋರ್ಟ್ ಗುರುವಾರ ಹೇಳಿದೆ.

ಭಯೋತ್ಪಾದನೆ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆಂದು ಆರೋಪಿಸಿ ಕೆಲವು ವ್ಯಕ್ತಿಗಳ ಮೇಲೆ ಉತ್ತರಪ್ರದೇಶದ ಸರ್ಕಾರ ಪ್ರಕರಣ ದಾಖಲಿಸಿತ್ತು. ಆದರೆ ನಂತರ ಪ್ರಕರಣವನ್ನು ಹಿಂಪಡೆಯಲು ಮುಂದಾಗಿತ್ತು.

ಇದಕ್ಕೆ ವಿರೋಧಿಸಿ ಸ್ಥಳಿಯ ವಕೀಲರಾದ ರಂಜನ ಅಗ್ನಿಹೋತ್ರಿ ಸೇರಿಂದತೆ 6 ಜನ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಸರಣಿ ಸ್ಫೋಟ ಮತ್ತು ಭಯೋತ್ಪಾದನೆ ಚಟುವಟಿಕೆಯಲ್ಲಿ ತೊಡಗಿಕೊಂಡವರ ವಿರುದ್ಧ ದಾಖಲಾಗಿರುವ ಪ್ರಕರಣವನ್ನು ಹಿಂಪಡೆಯದಂತೆ ಉತ್ತರ ಪ್ರದೇಶದ ಸರ್ಕಾರಕ್ಕೆ ಸೂಚಿಸಬೇಕು ಎಂದು ಮನವಿ ಮಾಡಿದ್ದರು.

ವಿಚಾರಣೆ ನಡೆಸಿದ ಹೈಕೋರ್ಟ್, ಭಯೋತ್ಪಾದನೆ ಪ್ರಕರಣವಾದ್ದರಿಂದ ಕೇಂದ್ರಕ್ಕೆ ಮಾಹಿತಿ ನೀಡದೆ ರಾಜ್ಯ ಸರ್ಕಾರ ಪ್ರಕರಣವನ್ನು ಹಿಂಪಡೆಯುವಂತಿಲ್ಲ. ಕೇಂದ್ರದ ಕಾಯ್ದೆ ಅಡಿ ಆರೋಪಿಗಳ ಮೇಲೆ ಪ್ರಕರಣ ದಾಖಲಿಸಲಾಗಿದೆ. ಹೀಗಾಗಿ ರಾಜ್ಯ ಸರ್ಕಾರ ಕೇಂದ್ರಕ್ಕೆ ಮಾಹಿತಿ ನೀಡಬೇಕು ಎಂದು ಹೈಕೋರ್ಟ್ ಸೂಚಿಸಿದೆ.

ನ್ಯಾಯಾಮೂರ್ತಿ ರಾಜೀವ್ ಶರ್ಮಾ ಮತ್ತು ಮಹೇಂದ್ರಾ ದಯಾಳ್ ಅವರನ್ನೊಳಗೊಂಡ ನ್ಯಾಯಾಪೀಠ ಈ ಆದೇಶ ಹೊರಡಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement