ಸುಪ್ರೀಂ ತೀರ್ಪಿನಿಂದ ಅಸಮಾಧಾನ: ಸೋನಿಯಾ
ಸಲಿಂಗಕಾಮ ಅಪರಾಧ ಎಂದು ನಿನ್ನೆ ಸುಪ್ರೀಂ ಕೋರ್ಟ್ ನೀಡಿದ ತೀರ್ಪಿಗೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಗುರುವಾರ...
ನವದೆಹಲಿ: ಸಲಿಂಗಕಾಮ ಅಪರಾಧ ಎಂದು ನಿನ್ನೆ ಸುಪ್ರೀಂ ಕೋರ್ಟ್ ನೀಡಿದ ತೀರ್ಪಿಗೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಗುರುವಾರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಈ ವಿಷಯವನ್ನಾ ಸಂಸತ್ತಿನಲ್ಲಿ ಮಂಡಿಸಿ ಕಾನೂನಿನ ಮಾನ್ಯತೆ ದೊರಕಿಸಿಕೊಡಲಾಗುವುದು. ಇದರಿಂದಾಗಿ ದೇಶದ ಎಲ್ಲಾ ನಾಗರಿಕರಿಗೆ ಸ್ವಾತಂತ್ರ್ಯ ದೊರೆಯಲಿದೆ ಎಂಬ ವಿಶ್ವಾಸವಿದೆ ಎಂದು ಸೋನಿಯಾ ಹೇಳಿದ್ದಾರೆ.
ಸಲಿಂಗಕಾಮ ಕುರಿತು ದೆಹಲಿ ಹೈಕೋರ್ಟ್ ನೀಡಿದ ತೀರ್ಪು ಸರಿಯಾಗಿತ್ತು. ದೆಹಲಿ ಹೈಕೋರ್ಟ್ ಹಳೇ ಕಾನೂನುಗಳನ್ನು ತಿದ್ದುಪಡಿ ಮಾಡಿ, ಮಾನವ ಹಕ್ಕುಗಳಿಗೆ ಸರಿಸಮಾನಾಗಿ ತೀರ್ಪು ನೀಡಿತ್ತು.
ಆದರೆ ಸುಪ್ರೀಂ ಕೋರ್ಟ್ ಸಲಿಂಗಕಾಮ ಅಪರಾಧ ಎಂದು ತೀರ್ಪು ನೀಡಿರುವುದು ಬೇಸರ ತಂದಿದೆ ಎಂದು ಸೋನಿಯಾ ವಿಷಾಧಿಸಿದ್ದಾರೆ.
ಕಾನೂನು ತಿದ್ದುಪಡಿಗೆ ಕೇಂದ್ರ ಸರ್ಕಾರ ಚಿಂತಿಸಿದೆ. ಸಲಿಂಗಕಾಮವನ್ನು ಅಕ್ರಮ ಎಂದು ಘೋಷಿಸಿ ಸುಪ್ರೀಂ ಕೋರ್ಟ್ ತೀರ್ಪು ನೀಡಿರುವ ಹಿನ್ನೆಲೆಯಲ್ಲಿ ಕಾನೂನು ತಿದ್ದುಪಡಿ ಮೂಲಕ ವಿವಾದವನ್ನು ಬಗೆಹರಿಸುವ ಚಿಂತನೆಯನ್ನು ಕೇಂದ್ರ ಸರ್ಕಾರ ನಡೆಸುತ್ತಿದೆ.